ಪ್ರೀತಿ ಮಾಡಿದ್ದೇ ತಪ್ಪಾಯ್ತಂತೆ: ಮಗಳನ್ನೇ ಕೊಂದ ಪಾಪಿ ತಂದೆ! - Mahanayaka

ಪ್ರೀತಿ ಮಾಡಿದ್ದೇ ತಪ್ಪಾಯ್ತಂತೆ: ಮಗಳನ್ನೇ ಕೊಂದ ಪಾಪಿ ತಂದೆ!

monika
08/02/2025

ಬೀದರ್: ತಾನು ಪ್ರೀತಿಸುತ್ತಿರುವ ಹುಡುಗನೊಂದಿಗೆ ಮದುವೆ ಮಾಡಿಕೊಡುವಂತೆ ಕೇಳಿದ ಮಗಳನ್ನು ತಂದೆ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ.

ಮೋನಿಕಾ ಮೋತಿರಾಮ ಜಾಧವ್(18) ತನ್ನ ತಂದೆಯಿಂದಲೇ ಹತ್ಯೆಗೀಡಾದ ದುರ್ದೈವಿಯಾಗಿದ್ದಾಳೆ. ಮಗಳನ್ನು ಕೊಲೆ ಮಾಡಿದ ನಂತರ ತಂದೆ ಮೋತಿರಾಮ ಸ್ಥಳದಿಂದ ಪರಾರಿಯಾಗಿದ್ದಾನೆ.

ಪ್ರೀತಿ ಪ್ರೇಮದಿಂದ ದೂರವಿರುವಂತೆ ತಂದೆ ಮಗಳಿಗೆ ವಾರ್ನಿಂಗ್ ನೀಡಿದ್ದಾನೆ. ಈ ವೇಳೆ ಮಗಳು ತನ್ನ ಪ್ರೀತಿ ವಿಷಯವನ್ನು ತಂದೆಗೆ ತಿಳಿಸಿದ್ದಾಳೆ. ನಾನು ಅವನನ್ನೇ ಮದುವೆಯಾಗುತ್ತೇನೆ ಎಂದು ತಂದೆಯನ್ನು  ಒಪ್ಪಿಸಲು ಮುಂದಾಗಿದ್ದಾಳೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಮೃಗೀಯವಾಗಿ ತಂದೆ ನಡೆದುಕೊಂಡಿದ್ದಾನೆ. ತಂದೆಯ ಹಲ್ಲೆಯಿಂದ ತೀವ್ರ ರಕ್ತಸ್ರಾವಕ್ಕೊಳಗಾಗಿ ಮಗಳು ಮೃತಪಟ್ಟಿದ್ದಾಳೆ.

ಘಟನೆ ಸಂಬಂಧ ಸಂತಾಪುರ ಪೊಲೀಸ್ ಠಾಣೆಯಲ್ಲಿ ಮೃತ ಯುವತಿಯ ತಾಯಿ ಭಾಗುಬಾಯಿ ದೂರು ನೀಡಿದ್ದು, ಆರೋಪಿ ತಂದೆಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ