ಇಟ್ ವಾಸ್ ಫೈನ್, ಇಟ್ ಇಸ್ ಆಲ್ ವೇಸ್ ಫೈನ್: ಕಾಕ್ರೋಚ್ ನಾಯಕರ ಜೊತೆ ಮಾತುಕತೆ ಬಳಿಕ ಜೆ.ಪಿ. ನಡ್ಡಾ ಪ್ರತಿಕ್ರಿಯೆ
ನವದೆಹಲಿ: ದೆಹಲಿಯಲ್ಲಿ ತೀವ್ರಗೊಂಡಿರುವ ‘ಸಂಸದ್ ಚಲೋ’ (Sansad Chalo) ಪ್ರತಿಭಟನೆಯ ನಡುವೆ, ‘ಕೊಕ್ರೋಚ್ ಜನತಾ ಪಾರ್ಟಿ’ (CJP) ನಿಯೋಗದೊಂದಿಗೆ ನಡೆಸಿದ ಮಾತುಕತೆಯ ಕುರಿತು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದು, “ಚರ್ಚೆ ಚೆನ್ನಾಗಿ ನಡೆಯಿತು, ಯಾವಾಗಲೂ ಚೆನ್ನಾಗಿಯೇ ಇರುತ್ತದೆ” (It was fine, it is always fine) ಎಂದು ಹೇಳಿದ್ದಾರೆ.
ಎನ್ ಡಿಎ (NDA) ಸಂಸದೀಯ ಪಕ್ಷದ ಸಭೆಗೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಡ್ಡಾ, ಸಿಜೆಪಿ ನಾಯಕರೊಂದಿಗೆ ನಡೆದ ಭೇಟಿಯ ಕುರಿತ ಮಾಧ್ಯಮಗಳಿಗೆ ಉತ್ತರಿಸಿದರು.
ಸಿಜೆಪಿ ನಿಯೋಗದ ಭೇಟಿ: ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಹಾಗೂ ಮುಖ್ಯ ವಕ್ತಾರ ಸೌರವ್ ದಾಸ್ ಅವರು ನಡ್ಡಾ ಅವರ ನಿವಾಸದಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ನಿಯೋಗ ಇರಿಸಿದ 3 ಪ್ರಮುಖ ಬೇಡಿಕೆಗಳು:
ನೀಟ್–ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆ.
ಜೀವ ಕಳೆದುಕೊಂಡ ನೀಟ್ ಅಭ್ಯರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ.
ಪ್ರಸ್ತುತ ಆಸ್ಪತ್ರೆಯಲ್ಲಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ತಕ್ಷಣದ ಬಿಡುಗಡೆ.
ಸಿಜೆಪಿ ನಾಯಕರ ಪ್ರಕಾರ, ಕೇಂದ್ರ ಸಚಿವರು ತಮ್ಮ ಬೇಡಿಕೆಗಳನ್ನು ಆಲಿಸಿದ್ದು, ಸಂಬಂಧಪಟ್ಟ ಸೂಕ್ತ ಹಂತದಲ್ಲಿ ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಆದರೆ ಯಾವುದೇ ತತ್ಕ್ಷಣದ ಲಿಖಿತ ಭರವಸೆ ನೀಡಿಲ್ಲ. ಶಿಕ್ಷಣ ಸಚಿವರು ರಾಜೀನಾಮೆ ನೀಡುವವರೆಗೆ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದು ಸಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.
ಮತ್ತೊಂದೆಡೆ, ಪರಿಸ್ಥಿತಿಯನ್ನು ತಿಳಿಗೊಳಿಸಲು ಮತ್ತು ಸಾರ್ವಜನಿಕ ಜೀವನವನ್ನು ಸಹಜ ಸ್ಥಿತಿಗೆ ತರಲು ಧರಣಿಯನ್ನು ಹಿಂಪಡೆಯುವಂತೆ ಜೆ.ಪಿ. ನಡ್ಡಾ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.
ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ಹಿರಿಯ ಅಧಿಕಾರಿಗಳು ಸೇರಿದಂತೆ ಸುಮಾರು 118 ಪೊಲೀಸ್ ಸಿಬ್ಬಂದಿ ಹಾಗೂ 60ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























