11:22 PM Thursday 21 - August 2025

ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿದ ಬಿಜೆಪಿ ಯುವ ಮುಖಂಡ: ಪೊಲೀಸರಿಂದ ಆರೋಪಿಗಾಗಿ ತಲಾಶ್

18/06/2023

ಮಧ್ಯಪ್ರದೇಶದ ಜಬಲ್ಪುರ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನೊಬ್ಬನ ಗುಂಡೇಟಿಗೆ ಮಹಿಳೆಯೊಬ್ಬಳು ಗಾಯಗೊಂಡಿರುವ ಘಟನೆ ನಡೆದಿದೆ. ಸಂತ್ರಸ್ತೆ ಗಾಯಗೊಂಡು ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಆಸ್ಪತ್ರೆಯ ಹಾಸಿಗೆಯಿಂದ ತೆಗೆದ ವೀಡಿಯೊದಲ್ಲಿ  ಪ್ರಿಯಂಶ್ ವಿಶ್ವಕರ್ಮ ಎಂದು ಗುರುತಿಸಲ್ಪಟ್ಟ ಬಿಜೆಪಿ ನಾಯಕ ತನ್ನ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. ಜಬಲ್ಪುರದ ತನ್ನ ಕಚೇರಿಯಲ್ಲಿ ವ್ಯಕ್ತಿ ಮಹಿಳೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಗಾಯಗೊಂಡ ಮಹಿಳೆಯನ್ನು ದೇವಿಕಾ ಠಾಕೂರ್ ಎಂದು ಗುರುತಿಸಲಾಗಿದೆ. ಫ್ರೀ ಪ್ರೆಸ್ ಜರ್ನಲ್ ವರದಿಯ ಪ್ರಕಾರ, ಧನ್ವಂತರಿ ನಗರದಲ್ಲಿ ಈ ಘಟನೆ ನಡೆದಿದೆ. ಯುವ ಬಿಜೆಪಿ ನಾಯಕ ಎಂದು ಹೇಳಲಾಗುವ ಪ್ರಿಯಂಶ್ ವಿಶ್ವಕರ್ಮ ತನ್ನ ಪರವಾನಗಿ ಪಡೆದ ಪಿಸ್ತೂಲ್ ನಿಂದ ಮಹಿಳೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆದಾಗ್ಯೂ, ಈ ವೀಡಿಯೊದಲ್ಲಿ ಬಿಜೆಪಿ ನಾಯಕ ತನ್ನ ಮೇಲೆ ಯಾಕೆ ಗುಂಡು ಹಾರಿಸಿದ್ದಾನೆ ಎಂದು ಮಹಿಳೆ ಹೇಳಿಲ್ಲ.

ಮಹಿಳೆಯನ್ನು ನೇರವಾಗಿ ಆಸ್ಪತ್ರೆಗೆ ಕರೆದೊಯ್ಯುವ ಬದಲು, ಪ್ರಿಯಂಶ್ ವಿಶ್ವಕರ್ಮ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನಿಸಿದ್ದಾನೆ‌ ಎಂದು ಆರೋಪಿಸಲಾಗಿದೆ. ಪೊಲೀಸರು ಈಗ ಭಾರತೀಯ ದಂಡ ಸಂಹಿತೆಯ ಐಪಿಸಿ ಸೆಕ್ಷನ್ 308 ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಏತನ್ಮಧ್ಯೆ, ಮಧ್ಯಪ್ರದೇಶ ಬಿಜೆಪಿಯು ಆರೋಪಿ ಪ್ರಿಯಾಂಶ್ ವಿಶ್ವಕರ್ಮ ತಮ್ಮ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಹೇಳಿದೆ. ಸಂತ್ರಸ್ತೆ ಆರೋಪಿಯ ಗೆಳತಿ ಎಂದು ಸ್ಥಳೀಯ ಮಾಧ್ಯಮ ವರದಿಗಳು ಹೇಳಿವೆ.

ಗುಂಡಿನ ದಾಳಿಯ ನಂತರ ಆರೋಪಿ ಪ್ರಿಯಾಂಶ್ ವಿಶ್ವಕರ್ಮ, ಗಾಯಗೊಂಡ ದೇವಿಕಾ ಅವರ ಸಹೋದರನಿಗೆ ಕರೆ ಮಾಡಿ, ನಿನ್ನ ಸಹೋದರಿ ಅನಾರೋಗ್ಯಕ್ಕೆ ಒಳಗಾದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾನೆ. ಸಿಸಿಟಿವಿ ದಾಖಲೆಗಳು ಮತ್ತು ಅಪರಾಧಕ್ಕೆ ಬಳಸಿದ ಆಯುಧದೊಂದಿಗೆ ಆರೋಪಿ ತನ್ನ ಕಚೇರಿಯಿಂದ ಪರಾರಿಯಾಗಿದ್ದಾನೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version