ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದ ಚಂದ್ರಶೇಖರಶ್ರೀಯನ್ನು ತರಾಟೆಗೆತ್ತಿಕೊಂಡ ರಂಭಾಪುರಿ ಪೀಠದ ಜಗದ್ಗುರು!

ಕಲಬುರಗಿ: ಸಿಎಂ ಸ್ಥಾನದಿಂದ ಕೆಳಗಿಳಿದು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿದ್ದರಾಮಯ್ಯನವರ ಎದುರೇ ಹೇಳಿಕೆ ನೀಡಿ ಮುಜುಗರ ಸೃಷ್ಟಿಸಿದ್ದರು. ಇದೀಗ ಮತ್ತೋರ್ವ ಸ್ವಾಮೀಜಿ ಸಿಎಂ ಬದಲಾವಣೆ ವಿಚಾರವಾಗಿ ಹೇಳಿಕೆ ನೀಡಿದ್ದಾರೆ.
ರಂಭಾಪುರಿ ಪೀಠದ ಜಗದ್ಗುರು ಇದೀಗ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ್ದು, ಒಕ್ಕಲಿಗ ಸಮುದಾಯದ ಚಂದ್ರಶೇಖರಶ್ರೀ ಸಿಎಂ ಸಮ್ಮುಖದಲ್ಲೇ ಬದಲಾವಣೆ ಬಗ್ಗೆ ಮಾತನಾಡಿದ್ದು ವಿಪರ್ಯಾಸ ಎಂದಿದ್ದಾರೆ.
ಕಲಬುರಗಿ ನಗರದಲ್ಲಿ ಮಾತನಾಡಿದ ಅವರು, ಬದಲಾವಣೆ ಸಮಯ ಬಂದ್ರೆ ‘ಕೈ’ ಹೈಕಮಾಂಡ್ ಉದಾಸೀನತೆ ತೋರದೇ ವೀರಶೈವ ಲಿಂಗಾಯತ ನಾಯಕರಿಗೆ ನೀಡಬೇಕು ಎಂದಿದ್ದಾರೆ.
ಸಿಎಂ ಸ್ಥಾನ ನೀಡಲು ಅಗದಿದ್ದರೇ ಉಪಮುಖ್ಯಮಂತ್ರಿ ಆದರೂ ಮಾಡಬೇಕು. ಕಾಂಗ್ರೆಸ್ ಹೈಕಮಾಂಡ್ ಇಂತಹ ಬೆಳವಣಿಗೆಗೆ ಕಡಿವಾಣ ಹಾಕಬೇಕು, ಇಲ್ಲದಿದ್ದರೇ ಸರ್ಕಾರದ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ. ಸಿದ್ದರಾಮಯ್ಯ ಅವರು ಯೋಗ್ಯರಿದ್ದರೆ ಸಿಎಂ ಸ್ಥಾನದಲ್ಲಿ ಅವರನ್ನೇ ಮುಂದುವರಿಸಿ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97