ಜಗದೀಶ್ ಶೆಟ್ಟರ್ ಗೂ ಟಿಕೆಟ್ ಕೈತಪ್ಪುವ ಭೀತಿ: ಇತ್ತೀಚೆಗೆ ಬಿಜೆಪಿ ಟಿಕೆಟ್ ಗಾಗಿ ಕಾಂಗ್ರೆಸ್ ತೊರೆದಿದ್ದ ಜಗದೀಶ್ ಶೆಟ್ಟರ್!

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಾರಿದ್ದ ಜಗದೀಶ್ ಶೆಟ್ಟರ್, ಈ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಹಾರಿದ್ದರು. ಈ ನಡುವೆ ಧಾರವಾಡ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರೀಕ್ಷಿಸಿದ್ದ ಶೆಟ್ಟರ್ ಗೆ ಅಲ್ಲಿ ಟಿಕೆಟ್ ಸಿಕ್ಕಿರಲಿಲ್ಲ, ಬಳಿಕ ಬೆಳಗಾವಿ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಶೆಟ್ಟರ್ ಗೆ ಇದೀಗ ನಿರಾಸೆಯಾಗುವ ಲಕ್ಷಣ ಕಂಡು ಬಂದಿದೆ.
ಹೌದು..! ಲೋಕಸಭಾ ಚುನಾವಣಾ ಟಿಕೆಟ್ ಗಾಗಿ ಬಿಜೆಪಿಗೆ ಹಾರಿದ್ದ ಜಗದೀಶ್ ಶೆಟ್ಟರ್ ಗೆ ಇದೀಗ ಟಿಕೆಟ್ ತಪ್ಪುವ ಭೀತಿ ಎದುರಾಗಿದೆ. ಕಾಂಗ್ರೆಸ್ನಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಕಣಕ್ಕಿಳಿದರೆ ಬಿಜೆಪಿ ಜಾತಿ ಕಾರ್ಡ್ ಬಳಕೆ ಮಾಡಿ ಬಿಜೆಪಿ ಜಗದೀಶ್ ಶೆಟ್ಟರ್ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಲಿದೆ ಎಂದು ಹೇಳಲಾಗಿದೆ.
ಇನ್ನೊಂದೆಡೆ ಬೆಳಗಾವಿ ಟಿಕೆಟ್ ಪಡೆಯಲು ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಕೂಡ ರೇಸ್ ನಲ್ಲಿದ್ದಾರೆ. ಯತ್ನಾಳ್ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಇದೀಗ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದ ಶೆಟ್ಟರ್ ಗೆ ಬಿಗ್ ಶಾಕ್ ಎದುರಾಗಿದೆ.
ಇತ್ತೀಚೆಗಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಗದೀಶ್ ಶೆಟ್ಟರ್ ಬಗ್ಗೆ ಮಾತನಾಡುತ್ತಾ, ಜಗದೀಶ್ ಶೆಟ್ಟರ್ ಶೀಘ್ರವೇ ಬಿಜೆಪಿಗೆ ಸೇರಿದ್ದಕ್ಕೆ ಪಶ್ಚಾತಾಪ ಪಡಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದೀಗ ಅಂತಹದ್ದೇ ವಾತಾವರಣ ಸೃಷ್ಟಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth