ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲೇ ಬಿಜೆಪಿಗೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್ - Mahanayaka

ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲೇ ಬಿಜೆಪಿಗೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್

jagdish shettar
25/01/2024

ನವದೆಹಲಿ:  ಕಳೆದ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ, ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ದೆಹಲಿ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭೂಪೇಂದ್ರ ಯಾದವ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ.  ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ