ಜಗ್ಗೇಶ್ ನೀನು ಇಂಥಾ ವಿಕೃತ ವ್ಯಕ್ತಿ ಎನ್ನುವುದು ಗೊತ್ತಿರಲಿಲ್ಲ: ಲಾಯರ್ ಜಗದೀಶ್ ಆಕ್ರೋಶ
ನಟ ನಿರ್ದೇಶಕ ಗುರುಪ್ರಸಾದ್ ಅವರ ನಿಧನದ ಬಳಿಕ ನಟ ಜಗ್ಗೇಶ್ ನೀಡಿರುವ ಹೇಳಿಕೆ ವಿರುದ್ಧ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದು, ಜಗ್ಗೇಶ್ ಅವರ ಮನಸ್ಥಿತಿ ವಿಕೃತಿ ಎಂದು ಹೇಳಿದ್ದಾರೆ.
ಗುರುಪ್ರಸಾದ್ ಅವರ ನಿಧನದ ಬಳಿಕ ಅವರ ಬಗ್ಗೆ ಜಗ್ಗೇಶ್ ಕೆಳಮಟ್ಟದಲ್ಲಿ ಟೀಕೆ ಮಾಡಿದ್ದು ಸರಿಯಲ್ಲ ಎಂದು ಜಗ್ಗೇಶ್ ಅವರ ಹೇಳಿಕೆಯನ್ನು ಜಗದೀಶ್ ಖಂಡಿಸಿದ್ದಾರೆ.
ವಾವ್ ಜಗ್ಗೇಶ್… ಸತ್ತ ವ್ಯಕ್ತಿ ಬಗ್ಗೆ ಎಂತಹಾ ವಿಶ್ಲೇಷಕ ಕೃತಿಯನ್ನು ಕೊಟ್ಟೆ. ಸಾವಿನಲ್ಲೂ ವಿಕೃತಿ ಕಾಣಬಹುದಾಗಿದೆ ಎಂಬುದನ್ನು ನಿನ್ನಿಂದ ಕಲಿಯಬೇಕಾಗಿದೆ. ಸಂಸ್ಕೃತಿಯೇ ಅದೇ ರೀತಿ ಇದೆಯೋ ಅಥವಾ ನಿನ್ನ ಮನಸ್ಥಿತಿಯೇ ಅಷ್ಟು ವಿಕೃತವಾಗಿದೆಯೋ ನನಗೆ ಗೊತ್ತಿಲ್ಲ. ಗುರುಪ್ರಸಾದ್ ಗೆ ಕೆರೆತ ಇತ್ತಾ? ಕೀವು, ರಕ್ತ ಬರುತ್ತಿತ್ತಾ? ಎಂಥ ಮನುಷ್ಯ ನೀನು? ಯಾವ ರೀತಿಯಲ್ಲಿ ಮನುಷ್ಯ ಎನ್ನಬೇಕೋ ತಿಳಿಯುತ್ತಿಲ್ಲ ಎಂದು ಜಗದೀಶ್ ಹೇಳಿದ್ದಾರೆ.
ರಾಘವೇಂದ್ರನ ಭಕ್ತನಾಗಿ, ನಿನಗೆ ಲೈಫ್ ಕೊಟ್ಟ ಡೈರೆಕ್ಟರ್ ಬಗ್ಗೆ ಈ ರೀತಿ ಮಾತಾಡ್ತೀಯ? ಸಾವಿನಲ್ಲೂ ವಿಕೃತಿ ಕಾಣುವಂತಹ ವ್ಯಕ್ತಿ ನೀನು ಎಂಬುದು ನನಗೆ ಗೊತ್ತಿರಲಿಲ್ಲ ಎಂದು ಜಗದೀಶ್ ತರಾಟೆಗೆತ್ತಿಕೊಂಡಿದ್ದಾರೆ.
25 ವರ್ಷದ ಹಿಂದೆ ಯಾವನಿಗೋ 5 ಲಕ್ಷ ರೂಪಾಯಿ ಕೊಡಬೇಕು ಅಂತ ಹನುಮಂತೇ ಗೌಡರನ್ನು ಕರೆದುಕೊಂಡು ನಮ್ಮ ಆಫೀಸ್ ಗೆ ಬಂದೆ. ಆವತ್ತು ನಾನು ನಿನ್ನ ರೈಟ್ ಹೇಳು ಅಂದೆ. ನೀನೇನು ರೌಡಿನಾ? ಆವತ್ತೇ ನಿನ್ನ ಯೋಗ್ಯತೆ ಗೊತ್ತಾಯಿತು ಎಂದು ಜಗದೀಶ್ ಆಕ್ರೋಶ ವ್ಯಕ್ತಪಡಿಸಿದರು.
ಗುರುಪ್ರಸಾದ್ ಬಗ್ಗೆ ನೀನು ಆಡಿದ ಮಾತು ನನಗಂತೂ ಜೀರ್ಣ ಆಗಿಲ್ಲ. ನಿನ್ನ ಮತ್ತು ಅಶೋಕನ ಡೀಲ್ ನನಗೆ ಚೆನ್ನಾಗಿ ಗೊತ್ತು. ಕಾಲಾಯ ತಸ್ಮೈ ನಮಃ. ಇಂದು ಗುರುಪ್ರಸಾದ್ ಮನೆಯ ಬಾಗಿಲಲ್ಲಿ ಇದ್ದ ಯಮ ನಾಳೆ ಯಾರ ಮನೆಗೆ ಬೇಕಾದರೂ ಬರಬಹುದು ಎಂದು ಅವರು ಜಗ್ಗೇಶ್ ಅವರನ್ನು ತರಾಟೆಗೆತ್ತಿಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: