ಹಾವಿಗೆ ಹಿಂಸೆ: ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲು - Mahanayaka

ಹಾವಿಗೆ ಹಿಂಸೆ: ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲು

jaggi vasudev
16/10/2022


Provided by

ಚಿಕ್ಕಬಳ್ಳಾಪುರ: ಹಾವಿಗೆ ಹಿಂಸೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಶಾ ಫೌಂಡೇಷನ್ ಸಂಸ್ಥಾಪಕ ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗೆ ದೂರು ಸಲ್ಲಿಸಲಾಗಿದೆ.

ಜಗ್ಗಿ ವಾಸುದೇವ್ ಅವರು ಜೀವಂತ ಹಾವು ಕೈಯಲ್ಲಿ ಹಿಡಿದು ಪ್ರದರ್ಶನ ಮಾಡಿದ್ದ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಉಪಅರಣ್ಯ ಸಂರಕ್ಷಣಾಧಿಕಾರಿಗೆ ಉರಗತಜ್ಞ ಪೃಥ್ವಿರಾಜ್ ಅವರು ದೂರು ನೀಡಿದ್ದಾರೆ.

ಇತ್ತೀಚೆಗೆ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಸದ್ಗುರು ಹಾವನ್ನ ಹಿಡಿದಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹೀಗಾಗಿ ಉರಗತಜ್ಞ ಪೃಥ್ವಿರಾಜ್ ಸದ್ಗುರು ವಿರುದ್ಧ ದೂರು ದಾಖಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ