ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿ

mohammad rahik
21/10/2022

ಹಿರಿಯಡಕ ಜೈಲಿಗೆ ಕರೆದುಕೊಂಡು ಹೋಗುತ್ತಿದ್ದ  ವೇಳೆ ಕಳ್ಳತನ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡ  ಘಟನೆ ನಡೆದಿದೆ.

ಮೊಬೈಲ್ ಅಂಗಡಿಯಲ್ಲಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದರು.

ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದರಿಂದ ಹಿರಿಯಡ್ಕದ ಸಬ್ ಜೈಲಿಗೆ ಕರೆದೊಯ್ಯುವಾಗ ಜೈಲ್ ಸಮೀಪದಿಂದ ಪೊಲೀಸರಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ.

ಭಟ್ಕಳ ಮೂಲದ ಮೊಹಮ್ಮದ್ ರಾಹಿಕ್ (22) ಪರಾರಿಯಾದ ವಿಚಾರಾಣಾಧೀನ ಆರೋಪಿ. ಕೆಲ ತಿಂಗಳ ಹಿಂದೆ ಬೀಜಾಡಿ ಸಮೀಪದಲ್ಲಿ ಮೊಬೈಲ್ ಅಂಗಡಿ ಕಳವು ಪ್ರಕರದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದರು ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version