ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಅಪರಾಧಿಗೆ ಜೈಲು ಶಿಕ್ಷೆ - Mahanayaka
8:23 PM Friday 11 - September 2026

ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಅಪರಾಧಿಗೆ ಜೈಲು ಶಿಕ್ಷೆ

court judgement
01/04/2023

ಉಡುಪಿ: ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ ಆರೋಪಿಗೆ ಉಡುಪಿ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2022 ಮಾರ್ಚ್ 26 ರಂದು ರಾತ್ರಿ ಗುರುರಾಜ್ ಎಂಬಾತನು, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್ತೆಯಲ್ಲಿರುವ ಸುನೀತಾ ರಾಮಚಂದ್ರರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ, ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯದ ನ್ಯಾಯಾಧೀಶೆ ಶಕುಂತಲಾ ಅವರು ಆರೋಪಿ ಗುರುರಾಜ್ಗೆ ಭಾ.ದಂ.ಸA.ಕಲA: 380 ರಡಿ 5 ವರ್ಷ ಮತ್ತು ಕಲಂ 457 ರಡಿ 5 ವರ್ಷಗಳ ಕಾಲ ಕಠಿಣ ಸಜೆ ಮತ್ತು ರೂ. 5000 ದಂಡ ವಿಧಿಸಿ, ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಸಾಧಾರಣಾ ಶಿಕ್ಷೆ ವಿಧಿಸಿ, ತೀರ್ಪು ನೀಡಿರುತ್ತಾರೆ.ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ವಾದ ಮಂಡಿಸಿರುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler