ಉಡುಪಿ: ಮನೆ ಕಳವು ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ
ಉಡುಪಿ: ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗೆ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2022 ಜನವರಿ 21 ರಂದು 1 ಗಂಟೆಯ ಸುಮಾರಿಗೆ ಸಂತೋಷ ಪೂಜಾರಿ ಎಂಬಾತನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆಯ ಪ್ರಮಿಳಾ ಬಂಗೇರಾರವರ ಮನೆಯ ಒಳಗೆ ಪ್ರವೇಶಿಸಿ, ಚಿನ್ನಾಭರಣಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ, ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯದ ನ್ಯಾಯಾಧೀಶ ವಿಘ್ನೇಶ್ ಕುಮಾರ್ ಅವರು ಆರೋಪಿ ಸಂತೋಷ ಪೂಜಾರಿಗೆ ಭಾ.ದಂ.ಸಂ. ಕಲಂ 380 ರಡಿ 3 ವರ್ಷ ಮತ್ತು ಕಲಂ 454 ರಡಿ 1 ವರ್ಷ ಒಟ್ಟು 4 ವರ್ಷ ಕಠಿಣ ಸಜೆ ಮತ್ತು ರೂ. 2000 ದಂಡ ವಿಧಿಸಿದ್ದು, ದಂಡ ಪಾವತಿಸಲು ತಪ್ಪಿದಲ್ಲಿ 2 ತಿಂಗಳ ಸಾಧಾರಣಾ ಶಿಕ್ಷೆಯನ್ನು ವಿಧಿಸಿ, ತೀರ್ಪು ನೀಡಿರುತ್ತಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ವಾದ ಮಂಡಿಸಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























