ಮರುಮದುವೆಗೆ ಒಪ್ಪದ ಸೊಸೆಯ ಮೂಗು, ನಾಲಿಗೆ ಕತ್ತರಿಸಿದ ಗಂಡನ ಮನೆಯವರು! - Mahanayaka

ಮರುಮದುವೆಗೆ ಒಪ್ಪದ ಸೊಸೆಯ ಮೂಗು, ನಾಲಿಗೆ ಕತ್ತರಿಸಿದ ಗಂಡನ ಮನೆಯವರು!

18/11/2020

ಜೈಪುರ: ಮರುಮದುವೆಗೆ ಸೊಸೆ ಒಪ್ಪಲಿಲ್ಲ ಎನ್ನುವ ಕಾರಣಕ್ಕಾಗಿ ಗಂಡನ ಮನೆಯವರು ಸೊಸೆಯ ಮೂಗು, ನಾಲಿಗೆಯನ್ನು ಕೊಯ್ದ ಆಘಾತಕಾರಿ ಘಟನೆ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಡೆದಿದ್ದು, ಸೊಸೆ ಇದೀಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮಂಗಳವಾರ ಈ ಘಟನೆ ನಡೆದಿದ್ದು, 30 ವರ್ಷದ ವಿಧವೆ ಸೊಸೆಗೆ ಆಕೆಯ ಗಂಡನ ಮನೆಯವರು ತಮ್ಮ ಸಂಬಂಧಿಯನ್ನು ಮದುವೆಯಾಗುವಂತೆ ಒತ್ತಡ ಹೇರಿದ್ದರು. ಆದರೆ, ಆಕೆಗೆ ಈ ಮದುವೆ ಇಷ್ಟವಿರಲಿಲ್ಲ.  ಈ ಕಾರಣಕ್ಕಾಗಿ ಹರಿತವಾದ ಆಯುಧದಿಂದ ಆಕೆಯ ನಾಲಿಗೆ ಕತ್ತರಿಸಿದ್ದು, ಮೂಗನ್ನೂ ಕೊಯ್ದು ಕ್ರೂರತೆ ಮೆರೆದಿದ್ದಾರೆ.

ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನು ಖಾನ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳು ಈ ಕೃತ್ಯದಲ್ಲಿ ಶಾಮೀಲಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ