ಜೈಪುರ ಎಲ್ಪಿಜಿ ಟ್ಯಾಂಕರ್ ಸ್ಫೋಟ: ಸಾವಿನ ಸಂಖ್ಯೆ 14ಕ್ಕೆ ಏರಿಕೆ; 30 ಮಂದಿ ಗಂಭೀರ - Mahanayaka

ಜೈಪುರ ಎಲ್ಪಿಜಿ ಟ್ಯಾಂಕರ್ ಸ್ಫೋಟ: ಸಾವಿನ ಸಂಖ್ಯೆ 14ಕ್ಕೆ ಏರಿಕೆ; 30 ಮಂದಿ ಗಂಭೀರ

21/12/2024

ಜೈಪುರದಲ್ಲಿ ಎಲ್ ಪಿಜಿ ಟ್ಯಾಂಕರ್ ಅಪಘಾತ-ಸ್ಫೋಟದಿಂದ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಗಾಯಗೊಂಡ 80 ಜನರಲ್ಲಿ ಕನಿಷ್ಠ 30 ಜನರ ಸ್ಥಿತಿ ಗಂಭೀರವಾಗಿದೆ.

ಎಲ್ಪಿಜಿ ಟ್ಯಾಂಕರ್ ಟ್ರಕ್ಗೆ ಡಿಕ್ಕಿ ಹೊಡೆದಿದ್ದು, ಈ ಪ್ರದೇಶವನ್ನು ಬೆಂಕಿಯು ಆವರಿಸಿದೆ.‌ ಕನಿಷ್ಠ 37 ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಎಲ್ಲಾ ವಾಹನಗಳನ್ನು ತೆರವುಗೊಳಿಸಿದ ನಂತರ ಆ ರಾತ್ರಿ ಹೆದ್ದಾರಿಯನ್ನು ಮತ್ತೆ ತೆರೆಯಲಾಯಿತು.
ರಾಜಸ್ಥಾನ ಸರ್ಕಾರ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.


ADS

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ