ಜಮ್ಮು – ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆ: ಸ್ವತಃ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಗೈರಾಗಲು ಕಾರಣ?
ಜಮ್ಮು – ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಗೈರಾಗಿದ್ದಾರೆ. ಅವರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಮತ್ತು ಮೆಹಬೂಬ ಮುಫ್ತಿಯವರ ಪಿಡಿಪಿ ಕೂಡ ಕಾರ್ಯಕ್ರಮವನ್ನು ಬಹಿಷ್ಕರಿಸಿದೆ.
ಈ ಬಾರಿ ಆರನೇ ವರ್ಷದ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆ ಮಾಡಲಾಗುತ್ತಿದೆ.
ಜಮ್ಮುವಿನ ಕನ್ವೆನ್ಷನ್ ಸೆಂಟರ್‌ನಲ್ಲಿ ಈ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಕಲ್ಪಿಸಬೇಕು ಎಂದು ಆಗ್ರಹಿಸುತ್ತಿರುವ ಸಿಎಂ ಅಬ್ದುಲ್ಲಾ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.
ಅಬ್ದುಲ್ಲಾ ವಿರುದ್ದ ವಾಗ್ದಾಳಿ ನಡೆಸಿರುವ ಜಮ್ಮು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವಿಂದರ್ ರೈನಾ, “ಪಕ್ಷದ ಹೊರತಾಗಿಯೂ ತಾನು ಸಾಂವಿಧಾನಿಕ ಹುದ್ದೆಯಲ್ಲಿದ್ದೇನೆ ಎಂಬುವುದನ್ನು ಅಬ್ದುಲ್ಲಾ ಅವರು ಅರ್ಥ ಮಾಡಿಕೊಳ್ಳಬೇಕು. ಕೇಂದ್ರಾಡಳಿತ ಪ್ರದೇಶ ದಿನಾಚರಣೆ ಪ್ರತೀ ವರ್ಷ ಮಾಡಲಾಗುತ್ತಿದೆ. ಸಾವಿಂಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಈ ಕಾರ್ಯಕ್ರಮಕ್ಕೆ ಹಾಜರಾಗುವುದು ಅವರ ಜವಾಬ್ಧಾರಿ ಎಂದಿದ್ದಾರೆ.
ಜಮ್ಮು ಕಾಶ್ಮೀರವನ್ನು ಒಡೆದು ಎರಡು ಕೇಂದ್ರಾಡಳಿತಗಳಾಗಿ ಮಾಡಿದ ಸಂಸ್ಥಾಪನಾ ದಿನವನ್ನು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ”ಕಪ್ಪು ದಿನ” ಎಂದು ಕರೆದಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಈ ನಿರ್ಧಾರವು ರಾಜ್ಯದ ಜನರ ಹಕ್ಕು ನಿರಾಕರಣೆಯ ದಿನವಾಗಿದೆ ಎಂದು ಅವರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj