ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ನಿಹಾಮಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ನಂತರ ಭದ್ರತಾ ಪಡೆಗಳು ಸುತ್ತುವರೆದು ಶೋಧ ನಡೆಸಿದವು.
ಭದ್ರತಾ ಪಡೆಗಳ ಶೋಧ ತಂಡದ ಮೇಲೆ ಉಗ್ರರು ಗುಂಡು ಹಾರಿಸಿದಾಗ ಶೋಧ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಮಾರ್ಪಟ್ಟಿತು. ನಂತರ ಅವರು ಪ್ರತಿದಾಳಿ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಂಡಿನ ಚಕಮಕಿ ಮುಂದುವರೆದಿದೆ ಮತ್ತು ಎರಡೂ ಕಡೆಯವರು ಯಾವುದೇ ಸಾವುನೋವುಗಳನ್ನು ವರದಿ ಮಾಡಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಹಲವಾರು ಎನ್ ಕೌಂಟರ್ ಗಳು ನಡೆದಿವೆ. ಅನೇಕ ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth