ಜಾತಿ ಜನಗಣತಿ ನಡೆಸಲು ಪ್ರಧಾನಿ ಮೋದಿಗೆ ಬೇಡಿಕೆ ಇಟ್ಟ ನಿತೀಶ್ ಕುಮಾರ್ ನೇತೃತ್ವದ ನಿಯೋಗ
ನವದೆಹಲಿ: ಬಿಹಾರ ಸೇರಿದಂತೆ ದೇಶದಾದ್ಯಂತ ಜಾತಿ ಜನಗಣತಿ ನಡೆಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಬಿಹಾರದ 10 ರಾಜಕೀಯ ನಾಯಕರ ನಿಯೋಗವು ನವದೆಹಲಿಯಲ್ಲಿ ಸೋಮವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿತು.
ಪ್ರಧಾನಿಯ ಭೇಟಿಯ ಬಳಿಕ ಮಾತನಾಡಿದ ನಿತೀಶ್ ಕುಮಾರ್, ನಮ್ಮ ಎಲ್ಲ ಸದಸ್ಯರ ಮಾತುಗಳನ್ನು ಪ್ರಧಾನಿ ಮೋದಿ ಆಲಿಸಿದ್ದಾರೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ನಾವು ಪ್ರಧಾನಿಯವರನ್ನು ಒತ್ತಾಯಿಸಿದ್ದೇವೆ. ಜಾತಿ ಜನಗಣತಿ ಬಗ್ಗೆ ರಾಜ್ಯ ವಿಧಾನಸಭೆಯಲ್ಲಿ ಎರಡು ಬಾರಿ ನಿರ್ಣಯಗಳನ್ನು ಹೇಗೆ ಅಂಗೀಕರಿಸಲಾಗಿದೆ ಎಂಬ ಬಗ್ಗೆ ಅವರಿಗೆ ವಿವರಿಸಿದ್ದೇವೆ ಎಂದು ತಿಳಿಸಿದರು.
ಇನ್ನೂ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಮಾತನಾಡಿ, ನಮ್ಮ ನಿಯೋಗವು ಸೋಮವಾರ ಪ್ರಧಾನಿಯವರನ್ನು ಭೇಟಿಯಾಗಿ, ಬಿಹಾರ ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಜಾತಿ ಆಧಾರಿತ ಜನಗಣತಿಗಾಗಿ ಮನವಿ ಮಾಡಿದ್ದೇವೆ. ನಾವು ಈಗ ಕೇಂದ್ರ ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.
ಇನ್ನಷ್ಟು ಸುದ್ದಿಗಳು…
ರಕ್ಷಾ ಬಂಧನ ಕಟ್ಟಿ ವಾಪಸ್ ಆಗುತ್ತಿದ್ದ ವೇಳೆ ಭೀಕರ ಅಪಘಾತ: ಪತಿ, ಪತ್ನಿ, ಮಗು ದಾರುಣ ಸಾವು
ಬಿಗ್ ಬಾಸ್ ಕ್ಯಾಮರ ಮುಂದೆಯೇ ಲೈಂಗಿಕ ಕ್ರಿಯೆ ನಡೆಸಲಾಗಿದೆ | ಸ್ಪರ್ಧಿಯಿಂದ ಗಂಭೀರ ಆರೋಪ
ಹೆಣ ಅಂತ ಅಂದು ಕೊಂಡ್ರು, ಆದ್ರೆ ಅದು ಜನ! | ಪೊಲೀಸರನ್ನೇ ಬೆಚ್ಚಿಬೀಳಿಸಿದ ಭೂಪ
ದೇವಸ್ಥಾನಕ್ಕೆ ಬಂದಿದ್ದ ತಂದೆ, ತಾಯಿ, ಮಗಳು ನದಿಯಲ್ಲಿ ಕೊಚ್ಚಿ ಹೋಗಿ ಸಾವು!
ಅಪ್ರಾಪ್ತ ಬಾಲಕಿಯ ಮೊಬೈಲ್ ಗೆ ಅಶ್ಲೀಲ ಚಿತ್ರ ಕಳುಹಿಸಿದ ಮಹಿಳೆ | ಮಹಿಳೆಯ ವಿಲಕ್ಷಣ ಮನಸ್ಥಿತಿಗೆ ಬೆಚ್ಚಿಬಿದ್ದ ಪೋಷಕರು
ವಿಡಿಯೋ ಮುಂದಿಟ್ಟುಕೊಂಡು ಬಿಜೆಪಿ ಮುಖಂಡ ಚಿ.ನಾ.ರಾಮು ವಿರುದ್ಧ ಮಹಿಳೆಯಿಂದ ಬ್ಲ್ಯಾಕ್ ಮೇಲ್ | ದೂರು ದಾಖಲು
ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ಪ್ರತಾಪ್ ಸಿಂಹ ಸಾಧನೆಯಲ್ಲ | ಹೆಚ್.ವಿಶ್ವನಾಥ್