ಜನಪರ ಹೋರಾಟಗಾರ ಜಿ.ರಾಜಶೇಖರ್ ನಿಧನ - Mahanayaka
10:14 AM Thursday 21 - August 2025

ಜನಪರ ಹೋರಾಟಗಾರ ಜಿ.ರಾಜಶೇಖರ್ ನಿಧನ

g rajashekhar
21/07/2022


Provided by

ಉಡುಪಿ: ಚಿಂತಕ, ಲೇಖಕ ಹಾಗೂ ಜನಪರ ಹೋರಾಟಗಾರರಾಗಿದ್ದ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ ಅವರು ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶ್ವಾಸಕೋಶದ ಸಮಸ್ಯೆಯಿಂದ ಗಂಭೀರ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಶೋಷಿತ ವರ್ಗಗಳ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಜಿ.ರಾಜಶೇಖರ್ ಅವರು ಕರಾವಳಿಯ ಹಲವಾರು ಜನಪರ ಹೋರಾಟಗಳಲ್ಲಿ ಭಾಗಿಯಾಗಿದ್ದರು. ಹೋರಾಟಗಾರರಿಗೆ, ಯುವಜನತೆಗೆ ಮಾರ್ಗದರ್ಶಕರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳು ಚಳುವಳಿಯ ಒಡನಾಡಿಗಳನ್ನು ಅಗಲಿದ್ದಾರೆ.  ಇನ್ನೂ ಜಿ.ರಾಜಶೇಖರ್ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ