ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

ಬೆಂಗಳೂರು: ಸಿಬಿಐ ಕೋರ್ಟ್ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.
ಜನಪ್ರತಿನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ರದ್ದಾಗಲಿದೆ. ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD