ನಾಳೆ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ: ಬಿಜೆಪಿ ಜೊತೆ ಕೆಆರ್‌ ಪಿಪಿ ವಿಲೀನ - Mahanayaka

ನಾಳೆ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ: ಬಿಜೆಪಿ ಜೊತೆ ಕೆಆರ್‌ ಪಿಪಿ ವಿಲೀನ

janardhan reddy
24/03/2024


Provided by

ಬೆಂಗಳೂರು: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳಲು ತೀರ್ಮಾನಿಸಿದ್ದು, ಮಾರ್ಚ್ 25ರಂದು ಅವರು ಅಧಿಕೃತವಾಗಿ  ಮತ್ತೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಬಿಜೆಪಿ ಜೊತೆ ಕೆಆರ್‌ ಪಿಪಿ ವಿಲೀನಕ್ಕೆ ಜನಾರ್ದನ ರೆಡ್ಡಿ ಮುಂದಾಗಿದ್ದಾರೆ. ನಾಯಕರ ಆಹ್ವಾನದ ಮೇರೆಗೆ ನಾಳೆ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎಂದು ಜನಾರ್ದನ ರೆಡ್ಡಿ ಅಧಿಕೃತವಾಗಿ ಘೋಷಿಸಿದ್ದಾರೆ.

ಬೆಂಗಳೂರಿನನಲ್ಲಿರುವ ತಮ್ಮ ಪಾರಿಜಾತ ನಿವಾಸದಲ್ಲಿ ಪದಾಧಿಕಾರಿಗಳು, ಬೆಂಬಲಗರ ಸಭೆ ನಡೆಸಿದ ಜನಾರ್ದನ ರೆಡ್ಡಿ, ಬಿಜೆಪಿ ನಾಯಕರು ನೀಡಿದ ಆಹ್ವಾನದ ಬಗ್ಗೆ ಮುಕ್ತವಾಗಿ ಚರ್ಚಿಸಿದರು.   ಇದೇ ವೇಳೆ ಬಿಜೆಪಿ ಜತೆ ಕೆಆರ್‌ ಪಿಪಿ ಪಕ್ಷದ ವಿಲೀನಕ್ಕೆ ಸರ್ವ ಸಮ್ಮತ ವ್ಯಕ್ತವಾಯಿತು.

ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲಾ‌ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ನಾಳೆ ಬಿಜೆಪಿಗೆ ಅಧಿಕೃತವಾಗಿ  ಸೇರ್ಪಡೆಯಾಗಲಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ