ಝೀರೋ ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿ ಹೀರೋ ಆಗಲು ಮುಂದಾಗಿದ್ದ ಜನಾರ್ದನ ರೆಡ್ಡಿ 2 ಕಾರು ಪೊಲೀಸ್ ವಶಕ್ಕೆ
ಗಂಗಾವತಿ(ಕೊಪ್ಪಳ): ಸಿಎಂ ಸಿದ್ದರಾಮಯ್ಯ ಅವರ ಕಾರು ಸಂಚರಿಸಲು ಹಾಕಿದ್ದ ಝೀರೋ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಹೀರೋ ಆಗಲು ಮುಂದಾಗಿದ್ದ ಶಾಸಕ ಜನಾರ್ದನ ರೆಡ್ಡಿ ಅವರ ಎರಡು ಕಾರುಗಳನ್ನು ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಗಂಗಾವತಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುವ ಸಂದರ್ಭದಲ್ಲಿ ಝೀರೊ ಟ್ರಾಫಿಕ್ ನಿಯಮ ಉಲ್ಲಂಘಿಸಿ ಸಿಎಂ ಕಾರಿಗೆ ಎದುರಾಗಿ ಶಾಸಕ ಜನಾರ್ದನ ರೆಡ್ಡಿ ಕಾರು ಚಲಾಯಿಸಿದ್ದರು ಎನ್ನಲಾಗಿದೆ. ಆದ್ರೆ ಅವರ ಕಾರು ಚಾಲಕ ಹುಸೇನ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎನ್ನಲಾಗಿದೆ.
ಝೀರೊ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ನಗರ ಸಂಚಾರಿ ಠಾಣೆಯ ಪೊಲೀಸರು ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: