ಜಾತ್ರೆಯಲ್ಲಿ ವ್ಯಾಪಾರಿಗೆ ಹಲ್ಲೆ: ರೌಡಿಶೀಟರ್‌ ಗಣೇಶ್‌ ಕಡಂಬು ಅರೆಸ್ಟ್ - Mahanayaka

ಜಾತ್ರೆಯಲ್ಲಿ ವ್ಯಾಪಾರಿಗೆ ಹಲ್ಲೆ: ರೌಡಿಶೀಟರ್‌ ಗಣೇಶ್‌ ಕಡಂಬು ಅರೆಸ್ಟ್

ganesh kadambu
21/01/2023

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಜಾತ್ರೆಯೊಂದರಲ್ಲಿ ವ್ಯಾಪಾರ ಮಾಡ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಣೇಶ್‌ ಕಡಂಬು ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಈತ ರೌಡಿಶೀಟರ್‌ ಆಗಿದ್ದಾನೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಪ್ರಕರಣದ ಉಳಿದ ಐದು ಆರೋಪಿಗಳು ತಲೆಮರೆಸಿಕೊಂಡಿದ್ದು, ಶೋಧ ನಡೆಸಲಾಗುತ್ತಿದೆ. ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್‌ ದಾಸ್‌ ಎಂಬುವವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿದ್ದರು.

ರಾತ್ರಿ 12:30ಕ್ಕೆ ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ಸಮಯದಲ್ಲಿ ಗಣೇಶ್‌ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರು ಬಂದು ಅಂಗಡಿ ಏಕೆ ಬಂದ್‌ ಮಾಡುತ್ತಿಯಾ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರು ನೀಡಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ