ಮಾಜಿ ಪ್ರಧಾನಿ ನೆಹರೂ ಅವರ ಕಾರು ಚಾಲಕರಾಗಿದ್ದ ಶತಾಯುಷಿ ಮೋನಪ್ಪ ಗೌಡ ನಿಧನ

monappa gowda
06/10/2022

ಮಂಗಳೂರು: ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಮತ್ತು ಕಡಲ ತಡಿಯ ಭಾರ್ಗವ ಶಿವರಾಮ ಕಾರಂತರ ಕಾರು ಚಾಲಕರಾಗಿದ್ದ ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ (102) ಎಂಬುವವರು ವಯೋಸಹಜ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ.

ಭಾರತದ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕೊಂಡಿದ್ದು, ನೆಹರೂ ಅವರ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪುತ್ರ, ಮೂವರು ಪುತ್ರಿಯರು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version