3 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದ ಜೆಡಿಎಸ್ | ಮಂಡ್ಯದಿಂದ HDK ಕಣಕ್ಕೆ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಬಿಸಿಯೇರಿದೆ. ಬಿಜೆಪಿ–ಜೆಡಿಎಸ್ ಮೈತ್ರಿಯಾದರೂ ಜೆಡಿಎಸ್ ಅಭ್ಯರ್ಥಿಗಳ ಕ್ಷೇತ್ರದ ಬಗ್ಗೆ ಸಾಕಷ್ಟು ಚರ್ಚೆಗಳ ನಂತರ ಇದೀಗ ಅಂತಿಮವಾಗಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ, ಕೋಲಾರ ಲೋಕಸಭಾ ಕ್ಷೇತ್ರದಿಂದ ಮಲ್ಲೇಶ್ ಬಾಬು ಕಣಕ್ಕಿಳಿಯಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್—ಬಿಜೆಪಿ ಮೈತ್ರಿ ಹಲವು ಗೊಂದಲದ ಗೂಡಿನ ನಡುವೆ ಸಾಗುತ್ತಿದೆ. ವಿವಿಧೆಡೆಗಳಲ್ಲಿ ಬಿಜೆಪಿ ಜೆಡಿಎಸ್ ನಡುವೆ ಸರಿಯಾದ ಹೊಂದಾಣಿಕೆ ಇಲ್ಲ ಎನ್ನುವ ಚರ್ಚೆಗಳು ಕೂಡ ನಡೆಯುತ್ತಿದೆ. ಇದೀಗ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಎಲ್ಲವೂ ಸರಿಯಾಗಿ ಮುನ್ನಡೆಯಾಗುತ್ತದೆಯೇ ಎನ್ನುವುದನ್ನು ಕಾದುನೋಡಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth