ಜೆಡಿಎಸ್ ಗೆ ನೆಲೆ ಇಲ್ಲ ಎಂದ ಸಿದ್ದರಾಮಯ್ಯ ಐ ಡೋಂಟ್ ಕೇರ್ ಈಶ್ವರಪ್ಪ ಅಂದ್ರು! - Mahanayaka
12:35 PM Thursday 29 - January 2026

ಜೆಡಿಎಸ್ ಗೆ ನೆಲೆ ಇಲ್ಲ ಎಂದ ಸಿದ್ದರಾಮಯ್ಯ ಐ ಡೋಂಟ್ ಕೇರ್ ಈಶ್ವರಪ್ಪ ಅಂದ್ರು!

11/02/2021

ಹುಬ್ಬಳ್ಳಿ: ಜೆಡಿಎಸ್ ಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ. ಈ ಕಾರಣಕ್ಕಾಗಿ ಅವರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಹೇಳಿಕೆ ನೀಡಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

ನಾನು ರಾಜ್ಯದಲ್ಲಿ ಏನು ಅಭಿವೃದ್ಧಿ ಮಾಡಿದ್ದೇನೆ ಎನ್ನುವುದು ಜನತೆಗೆ ಗೊತ್ತಿದೆ. ಇದನ್ನು ಕೇಳಲು ಈಶ್ವರಪ್ಪ ಯಾರು ಎಂದು ಪ್ರಶ್ನಿಸಿದ ಅವರು,  ನನಗೆ ಈಶ್ವರಪ್ಪ ಸರ್ಟಿಫಿಕೇಟ್ ನೀಡಬೇಕಿಲ್ಲ. ಐ ಡೋಂಟ್ ಕೇರ್ ಈಶ್ವರಪ್ಪ ಎಂದು ಅವರು ತಿರುಗೇಟು ನೀಡಿದರು.

ಸಂದರ್ಭದಲ್ಲಿ ಮುಂಬವರು ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ ಎಂಬ ದೇವೇಗೌಡ ಅವರ ಹೇಳಿಕೆಗೆ  ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜೆಡಿಎಸ್ ಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ. ಹಾಗಾಗಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಈ ನಡೆಯಿಂದ ಬಿಜೆಪಿಯವರಿಗೆ ಸಹಾಯ ಮಾಡಲು ಅವರು  ಹೊರಟಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ