ಧರ್ಮಸ್ಥಳಕ್ಕೆ ಹೊರಟ ಜೆಡಿಎಸ್ ಸತ್ಯ ಯಾತ್ರೆ: ಷಡ್ಯಂತ್ರ, ಹುನ್ನಾರ, ಸಂಘಟಿತ ಪಿತೂರಿ ಎಂದ ನಿಖಿಲ್!

ಹಾಸನ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸಲಾಗ್ತಿದೆ ಎಂದು ಆರೋಪಿಸಿ ರಾಜ್ಯ ಜೆಡಿಎಸ್ ಬಿಜೆಪಿ ಹೋರಾಟಕ್ಕೆ ಕೈಜೋಡಿಸಿದ್ದು, ಜೆಡಿಎಸ್ ಕಾರ್ಯಕರ್ತರು ಸತ್ಯ ಯಾತ್ರೆ, ಧರ್ಮಸ್ಥಳ ಚಲೋ ರ‍್ಯಾಲಿಯಲ್ಲಿ ಭಾಗಿಯಾಗಿದ್ದಾರೆ.
ಹಾಸನದಿಂದ ಧರ್ಮಸ್ಥಳಕ್ಕೆ ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದು, ರ‍್ಯಾಲಿಯಲ್ಲಿ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಎಂಎಲ್‌ಸಿಗಳು ಭಾಗಿಯಾಗಿದ್ದಾರೆ. ಹಾಸನ ಹೊರವಲಯದ ಕಂದಲಿ ಬಳಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹೊರಟಿತು.
ಇನ್ನೂ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಕಳೆದ ಹಲವಾರು ದಿನಗಳಿಂದ ಅಪಪ್ರಚಾರಗಳು, ಧರ್ಮಸ್ಥಳದ ಆವರಣದ ಸುತ್ತಮುತ್ತ ಅನುಮಾನ ಎಡೆಮಾಡಿಕೊಡುವಂತಹ ಷಡ್ಯಂತ್ರ, ಹುನ್ನಾರ, ಸಂಘಟಿತ ಪಿತೂರಿ ನಡೆದಿದೆ. ಇದೆಲ್ಲದರ ವಿರುದ್ಧವಾಗಿ ಯಾತ್ರೆ. ಇದರಲ್ಲಿ ರಾಜಕೀಯವಾಗಿ ಬೆರೆಸುವ ಪ್ರಶ್ನೆ ಇಲ್ಲ. ಪಕ್ಷಾತೀತವಾಗಿ ಇವತ್ತು, ಅಸಂಖ್ಯಾತ ಭಕ್ತರ ಗಣ ದೇಶವ್ಯಾಪಿ, ಹಲವಾರು ಕಡೆಗಳಿಂದ ಆರಾಧ್ಯ ದೈವ ಮಂಜುನಾಥಸ್ವಾಮಿ, ಅಣ್ಣಪ್ಪಸ್ವಾಮಿ ಕಾಣಲು ಬರುತ್ತಿದ್ದಾರೆ ಎಂದು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD