ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿಯಾಗಿ ಜೀಪು ಚಾಲಕ ಪರಾರಿ: ವ್ಯಕ್ತಿ ಸಾವು
ಸಂತೆಕಟ್ಟೆ ಸಮೀಪದ ಎಲ್ ವಿಟಿ ರಿಕ್ಷಾ ನಿಲ್ದಾಣದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.8ರಂದು ರಾತ್ರಿ 8 ಗಂಟೆ ಸುಮಾರಿಗೆ ಜೀಪೊಂದು ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಪುತ್ತೂರು ಗ್ರಾಮದ ನಯಂಪಳ್ಳಿಯ ಎಲ್.ವಿ.ಪಿ. ಶಾಲೆ ಸಮೀಪದ ನಿವಾಸಿ ರಾಮಚಂದ್ರ ಮೃತದುರ್ದೈವಿ. ರಾಮಚಂದ್ರ ಅವರು ಎಲ್.ವಿ.ಟಿ. ರಿಕ್ಷಾ ನಿಲ್ದಾಣದಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ ಆಂಧ್ರಪ್ರದೇಶ ಮೂಲದ ಜೀಪ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು, ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಚಾಲಕ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka