ಜಿನ್ನಾ ಟವರ್‌ ಗೆ ಎಪಿಜೆ ಅಬ್ದುಲ್ ಕಲಾಂ ಹೆಸರಿಡಲು ಬಿಜೆಪಿ ಆಗ್ರಹ - Mahanayaka
10:22 AM Wednesday 10 - September 2025

ಜಿನ್ನಾ ಟವರ್‌ ಗೆ ಎಪಿಜೆ ಅಬ್ದುಲ್ ಕಲಾಂ ಹೆಸರಿಡಲು ಬಿಜೆಪಿ ಆಗ್ರಹ

jinnah tower
25/05/2022

ಆಂಧ್ರ: ಆಂಧ್ರದ ಗುಂಟೂರಿನ ಜಿನ್ನಾ ಟವರ್ ಸೆಂಟರ್‌ ಗೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.


Provided by

ಮರುನಾಮಕರಣಕ್ಕೆ ಆಗ್ರಹಿಸಿ ಮಂಗಳವಾರ ಸಂಜೆ ಮೆರವಣಿಗೆ ನಡೆಸಲು ಯತ್ನಿಸಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸುನೀಲ್ ದಿಯೋಧರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪಕ್ಷದ ಯುವ ಘಟಕ BJYM ಸಭೆಯ ನಂತರ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಜಿನ್ನಾಟವರ್‌ಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲು ಪ್ರಯತ್ನಿಸಿದರು ಆದರೆ ಪೊಲೀಸರು ಅವರನ್ನು ತಡೆದು ಬಂಧಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಮತ್ತು ಇತರ ಹಿಂದೂ ಸಂಘಟನೆಗಳು ಐತಿಹಾಸಿಕ ಜಿನ್ನಾ ಟವರ್‌ಗೆ ಮರುನಾಮಕರಣ ಮಾಡಬೇಕೆಂದು ಒತ್ತಾಯಿಸುತ್ತಿದ್ದರೂ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿಯ ರಾಜ್ಯಸಭಾ ಸದಸ್ಯ ಜಿವಿಎಲ್ ನರಸಿಂಹ ರಾವ್ ಅವರು ತಮ್ಮ ಪಕ್ಷದ ನಾಯಕರ ವಿರುದ್ಧ ಪೋಲೀಸರ ದೌರ್ಜನ್ಯ ಮತ್ತು ಬಂಧನವನ್ನು ಖಂಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಕ್ಕರೆ ರಫ್ತಿಗೆ ಕೇಂದ್ರ ನಿರ್ಬಂಧ:  ಹಣದುಬ್ಬರ ನಿಯಂತ್ರಣಕ್ಕೆ ಕ್ರಮ

ಸ್ಪೈಸ್ ಜೆಟ್ ಮೇಲೆ ವೈರಸ್ ದಾಳಿ:  ಹಲವಾರು ವಿಮಾನಗಳು ಸ್ಥಗಿತ

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ  ಮಾಜಿ ಪ್ರಧಾನ ಅರ್ಚಕ ನಿಧನ

ಶಾಲೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ ಯುವಕ: 21 ವಿದ್ಯಾರ್ಥಿಗಳು ಸಾವು

ಮಂಗಳಮುಖಿಯರಿಗೆ ಅವಮಾನ: ಸಿಎಂ ಇಬ್ರಾಹಿಂ ವಿರುದ್ಧ ಮಂಜಮ್ಮ ಜೋಗತಿ ತೀವ್ರ ಬೇಸರ

 

ಇತ್ತೀಚಿನ ಸುದ್ದಿ