ಕಮಲ್ ನಾಥ್ ‘ಕೈ’ ತಪ್ಪಿದ ಅಧ್ಯಕ್ಷ ಸ್ಥಾನ: ಮಧ್ಯಪ್ರದೇಶದ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಜಿತು ಪಟ್ವಾರಿ ನೇಮಕ

17/12/2023

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಿತು ಪಟ್ವಾರಿ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ. ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ಕಮಲ್ ನಾಥ್ ಅವರ ಸ್ಥಾನಕ್ಕೆ ಪಟ್ವಾರಿ ಅವರನ್ನು ಆಯ್ಕೆ ಮಾಡಲಾಗಿದೆ.

“ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ” ಎಂದು ಕಾಂಗ್ರೆಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. “ನಿರ್ಗಮಿತ ಅಧ್ಯಕ್ಷ ಕಮಲ್ ನಾಥ್ ಅವರ ಕೊಡುಗೆಗಳನ್ನು ಪಕ್ಷ ಶ್ಲಾಘಿಸುತ್ತದೆ” ಎಂದು ಅದು ಹೇಳಿದೆ.

ಉಮಂಗ್ ಶಿಂಗರ್ ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮತ್ತು ಹೇಮಂತ್ ಕಟಾರೆ ಅವರನ್ನು ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಉಪನಾಯಕರನ್ನಾಗಿ ನೇಮಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version