ಡಿಜಿಪಿಯ ಕತ್ತು ಸೀಳಿ ಬರ್ಬರ ಹತ್ಯೆ: ಮನೆ ಕೆಲಸದ ಯುವಕನ ಬಂಧನ - Mahanayaka
12:15 AM Saturday 23 - August 2025

ಡಿಜಿಪಿಯ ಕತ್ತು ಸೀಳಿ ಬರ್ಬರ ಹತ್ಯೆ: ಮನೆ ಕೆಲಸದ ಯುವಕನ ಬಂಧನ

hemant lohia case
04/10/2022


Provided by

ಜಮ್ಮು: ಜಮ್ಮುವಿನಲ್ಲಿ ಸೋಮವಾರ ಜಮ್ಮುಕಾಶ್ಮೀರದ ಪೊಲೀಸ್ ಪ್ರಧಾನ ನಿರ್ದೇಶಕ ಹೇಮಂತ್ ಕುಮಾರ್ ಅವರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅವರ ಮನೆ ಕೆಲಸದ ಸಹಾಯಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಾಸೀರ್ ಅಹ್ಮದ್ ಲೋಹಿಯಾ(23) ಬಂಧಿತ ಆರೋಪಿಯಾಗಿದ್ದಾನೆ. ಹತ್ಯೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ.

ಇನ್ನೂ ಮನೆ ಕೆಲಸ ಮಾಡುತ್ತಿದ್ದ ಯಾಸೀರ್ ಹಲವು ದಿನಗಳಿಂದಲೂ ಖಿನ್ನತೆಗೆ ಒಳಗಾಗಿದ್ದ ಎಂದು ಮತ್ತೋರ್ವ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

57 ವರ್ಷದ ಹೇಮಂತ್ ಕುಮಾರ್ ಅವರು ಜಮ್ಮುವಿನ ಹೊರವಲಯದ ಉದಯವಾಲಾ ನಿವಾಸದಲ್ಲಿ ನೆಲೆಸಿದ್ದರು. ಅಲ್ಲಿಯೇ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಆಗಸ್ಟ್ ನಲ್ಲಿ ಡಿಜಿಪಿ ಹುದ್ದೆಯನ್ನು ಅಲಂಕರಿಸಿದ್ದ ಹೇಮಂತ್ ಕುಮಾರ್, ಕೆಲವೇ ತಿಂಗಳಲ್ಲಿ ಹತ್ಯೆಗೀಡಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ