ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಪ್ರಧಾನಿ ‘ಕಾಮ್ ಕಿ ಬಾತ್’ ಬದಲು ‘ಮನ್ ಕಿ ಬಾತ್’ ಮೇಲೆ ಗಮನಹರಿಸಿದ್ದಾರೆ ಎಂದ ರಾಹುಲ್ ಗಾಂಧಿ
ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಪಕ್ಷದ ಪ್ರಚಾರಕ್ಕಾಗಿ ಒಂದು ದಿನದ ಭೇಟಿ ನೀಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. “ಕಾಮ್ ಕಿ ಬಾತ್” ಅನ್ನು ನಿರ್ಲಕ್ಷಿಸಿ “ಮನ್ ಕಿ ಬಾತ್” ಮೇಲೆ ಗಮನ ಹರಿಸಿದ್ದಾರೆ ಎಂದು ಟೀಕಿಸಿದರು. ಪೂಂಚ್ ನ ಸೂರನ್ಕೋಟ್ ಮತ್ತು ನಂತರ ಶ್ರೀನಗರದ ಶಾಲ್ಟೆಂಗ್ ನಲ್ಲಿ ಬೃಹತ್ ಜನಸಮೂಹವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಿರುದ್ಯೋಗವನ್ನು ಪರಿಹರಿಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಮೋದಿ ತಮ್ಮ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಆಗಾಗ್ಗೆ ಮಾತನಾಡುತ್ತಿದ್ದರೂ, ಉದ್ಯೋಗ ಮತ್ತು ಅಭಿವೃದ್ಧಿಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಮರೆಯುತ್ತಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ರಾಹುಲ್ ಗಾಂಧಿಯವರ ಪ್ರಕಾರ, ಈಗ ಮೋದಿಯವರ ಮಾತುಗಳನ್ನು ಕಡಿಮೆ ಜನರು ಕೇಳುತ್ತಿದ್ದಾರೆ. ನಿರುದ್ಯೋಗವು ದೇಶಾದ್ಯಂತ ಹರಡಿದೆ.
ಜಮ್ಮು ಮತ್ತು ಕಾಶ್ಮೀರವು ಕೂಡಾ ಅದೇ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದರು. ಸರ್ಕಾರವು ಈ ಪ್ರದೇಶದ ರಾಜ್ಯತ್ವವನ್ನು ಕಸಿದುಕೊಂಡಿದೆ. ಜನರಿಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೊರಗಿನವರಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಅವರು ಟೀಕಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth