ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್  ತರಬೇತಿ: ಇಲ್ಲಿದೆ ವಿವರ - Mahanayaka
6:34 PM Sunday 28 - September 2025

ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್  ತರಬೇತಿ: ಇಲ್ಲಿದೆ ವಿವರ

beauty parlour
24/09/2025

ಬೆಂಗಳೂರು: ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ  ದಿನಾಂಕ 06/10/2025 ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್  ತರಬೇತಿ ಶಿಬಿರವನ್ನು  ಏರ್ಪಡಿಸಿದೆ.


Provided by

ವಯೋಮಿತಿ: 

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ  ಮಹಿಳೆಯರು  ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಸವಲತ್ತು, ಅರ್ಹತೆ:

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು.  ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.  ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ  ಓದಲು ಮತ್ತು ಬರೆಯಲು ತಿಳಿದಿರಬೇಕು.  ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಸಂದರ್ಶನ ವಿವರ:

ಆಸಕ್ತಿಯುಳ್ಳ ಶಿಬಿರಾರ್ಥಿಗಳು ದಿನಾಂಕ : 30/0̈9/2025 ಮಂಗಳವಾರ ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ.

ಸಂಪರ್ಕ ಮಾಹಿತಿ:

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ  ದೂರವಾಣಿ ಸಂಖ್ಯೆ  8970476050, 9591514154, 9686248369, 8970446644, 9505894247 ಗಳಿಗೆ ಸಂಪರ್ಕಿಸಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ