ಮಂಗಳೂರಿಗರಿಗೆ ಸುವರ್ಣಾವಕಾಶ: ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹದಲ್ಲಿ ಉದ್ಯೋಗಾವಕಾಶ

ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹವು ಮಂಗಳೂರಿನಲ್ಲಿ ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಏರ್ಪಡಿಸಿದೆ. ಯುಎಇ, ಖತಾರ್, ಬಹ್ರೇನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ ನಡೆಸುತ್ತಿರುವ ಲುಲು ಸಂಸ್ಥೆ, ಈ ಪ್ರಮುಖ ರಿಟೈಲ್ ಉದ್ಯಮದ ವಿವಿಧ ಹುದ್ದೆಗಳಿಗೆ ಯುವ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ.
ಉದ್ಯೋಗವು ಮಾರಾಟ, ಕೌಂಟರ್ ಮಾರಾಟ ಮತ್ತು ಕ್ಯಾಷಿಯರ್ ಹುದ್ದೆಗಳನ್ನು ಒಳಗೊಂಡಿರುತ್ತವೆ. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ನೌಕರರಾಗಿ ಅನುಭವವಿರುವ ವೃತ್ತಿಪರರು ಮತ್ತು ಪೂರ್ವ ಅನುಭವವಿಲ್ಲದವರು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ಕನಿಷ್ಠ ವಿದ್ಯಾರ್ಹತೆ ಪಿಯುಸಿಯಾಗಿದ್ದು (ಪ್ರಿ-ಯೂನಿವರ್ಸಿಟಿ ಕೋರ್ಸ್), ಅರ್ಜಿದಾರರು 21 ರಿಂದ 28 ವರ್ಷಗಳ ನಡುವಿನ ವಯಸ್ಸಿನವರಾಗಿರಬೇಕು. ಇಂಗ್ಲಿಷ್ ನಲ್ಲ್ಲಿ ಸಂವಹನ ಮಾಡುವುದು ಅಭ್ಯರ್ಥಿಗಳಿಗೆ ಕಡ್ಡಾಯವಾಗಿದೆ.
ಹುದ್ದೆಗಳಿಗೆ ವೇತನ ಶ್ರೇಣಿಯು 1200 ಯುಎಇ ಧಿರಾಮ್ ಗಳಿಂದ 1400 ಧಿರಾಮ್ ತನಕ ಮತ್ತು 200 ಧಿರಾಮ್ ಆಹಾರ ಭತ್ಯೆ ದೊರೆಯಲಿದೆ. ವಸತಿ, ವೀಸಾ ಮತ್ತು ವಿಮಾನ ಟಿಕೆಟ್ ವ್ಯವಸ್ಥೆಗಳನ್ನು ಸಂಸ್ಥೆಯು ನೋಡಿಕೊಳ್ಳುತ್ತದೆ.
ಸುಮಾರು 400 ಉದ್ಯೋಗ ಅವಕಾಶಗಳಿದ್ದು, 2023 ರ ಜೂನ್ 22 ಮತ್ತು 23 ರಂದು ಮಂಗಳೂರಿನ ಫೆರ್ನಾಂಡಿಸ್ ಗ್ರೂಪ್ ಕಛೇರಿಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಸಂದರ್ಶನವನ್ನು ನಡೆಸಲಾಗುವುದು ಎಂದು ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯ ಪ್ರವರ್ತಕರಾದ ವಿಲ್ಸನ್ ಫೆರ್ನಾಂಡಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂದರ್ಶನ ಆಫೀಸಿನ ವಿಳಾಸ: ಫೆರ್ನಾಂಡಿಸ್ ಗ್ರೂಪ್, ಮೆಟ್ರೋ ಪ್ಲಾಜಾ, 3ನೇ ಮಹಡಿ, ಆಕ್ಸಿಸ್ ಬ್ಯಾಂಕಿನ ಮೇಲಿನ ಮಹಡಿ, ಮೋರ್ ಸೂಪರ್ ಮಾರ್ಕೆಟಿನ ಎದುರುಗಡೆ, ವೆಲೆನ್ಸಿಯಾ, ಮಂಗಳೂರು 575002. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: +91 9686675463 / 9819044376 ಸಂಪರ್ಕಿಸಬಹುದಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw