ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ:  249 ಹುದ್ದೆಗಳು - Mahanayaka

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ:  249 ಹುದ್ದೆಗಳು

sail recruitment
09/07/2024

ಭಾರತ ದೇಶದಲ್ಲಿ ಉನ್ನತ ಕಂಪನಿಯಾಗಿರುವಂತಹ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 249 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಕೋರಲಾಗಿದೆ.


Provided by

ಕೆಮಿಕಲ್, ಸಿವಿಲ್, ಕಂಪ್ಯೂಟರ್ ಸೇರಿದಂತೆ ವಿವಿಧ ಎಂಟು ವಿಭಾಗಗಳಲ್ಲಿ ಒಟ್ಟು 249 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 28 ವರ್ಷದೊಳಗೆ ಇರಬೇಕು. ಅದೇ ರೀತಿ ಅರ್ಜಿ ಸಲ್ಲಿಸಲು ಬೇಕಾಗಿರುವ ಇತರೆ ಅಗತ್ಯ ಮಾಹಿತಿಗಳನ್ನು ಈ ಲೇಖನದಿಂದ ತಿಳಿದುಕೊಂಡು ಅರ್ಜಿ ಸಲ್ಲಿಸಿ.

SAIL Recruitment 2024 — ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ವಿಭಾಗವಾರು ಹುದ್ದೆಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು, ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಯಾವ ವಿಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತೀರೋ ಅಂತಹ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಿ.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಮಾಡಿಕೊಳ್ಳಲು ನಿಗದಿಪಡಿಸಿದ ಅರ್ಹತೆಗಳು :

ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಥವಾ ಆಕಾಂಕ್ಷಿಗಳು ನೇಮಕಾತಿಯಲ್ಲಿ ಸೂಚಿಸಿರುವಂತೆ ಸಂಬಂಧಪಟ್ಟ ಹುದ್ದೆಗಳಿಗೆ ಅನುಗುಣವಾಗಿರುವ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದು ಅದರಲ್ಲಿ ಕನಿಷ್ಠ 55 ಪರ್ಸೆಂಟ್ ಅಂಕಗಳೊಂದಿಗೆ ಪಾಸಾಗಿರಬೇಕು.

Age limit and Age relaxation : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2024ರ ಜುಲೈ 25ರ ವೇಳೆಗೆ 28 ವರ್ಷದ ಒಳಗಿರಬೇಕು. ಇದರ ಅರ್ಥ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಜುಲೈ 25 1996ರ ನಂತರ ಜನಿಸಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಸಾಮಾನ್ಯವಾಗಿ ಇತರೆ ನೇಮಕಾತಿಯಂತೆ ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಸಡಿಲಿಕೆ ನೀಡಲಾಗುತ್ತದೆ.

 ನಿಗದಿಪಡಿಸಿದ ಅರ್ಜಿ ಶುಲ್ಕಗಳು :

* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 700 ರೂಪಾಯಿ ಇದೆ.

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ 200 ರೂಪಾಯಿ ide.

ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬ ಮಾಹಿತಿ?

ನೇಮಕಾತಿಗೆ ಅರ್ಜಿ ಸಲ್ಲಿಸಲು ನೀವು ಸಂಪೂರ್ಣ ಅರ್ಹತೆಗಳನ್ನು ಹೊಂದಿದ್ದೀರಿ ಎಂಬ ಮಾಹಿತಿಯನ್ನು ಖಚಿತಪಡಿಸಿಕೊಂಡ ಮೇಲೆ ನೀವು ಕೆಳಗಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 25 ಆಗಿರುತ್ತದೆ.

ಅರ್ಜಿ ಸಲ್ಲಿಸಲು ಜಾಲತಾಣದ ಲಿಂಕ್ : www.sail.co.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ