ಗಂಡ ಹೆಂಡತಿ ಜಗಳ ಇಡೀ ದಿನ ತೋರಿಸೋದು ಪತ್ರಿಕೋದ್ಯಮನಾ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು.
ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ? ಎಂದು ಪ್ರಶ್ನಿಸಿದ ಅವರು, ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ? ಅಂತ ಮುಖಕ್ಕೆ ಮೈಕ್ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ ನನಗಂತೂ ಅರ್ಥ ಆಗ್ತಾ ಇಲ್ಲ ಎಂದರು.
ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97