ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಮಂಗಳೂರು: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಅವರು ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 48 ವರ್ಷ ವಯಸ್ಸಾಗಿತ್ತು.
ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭುವನೇಂದ್ರ ಪುದುವೆಟ್ಟು, ಕಳೆದ 6 ತಿಂಗಳಿಂದ ಬೆಳ್ತಂಗಡಿ ಸುದ್ದಿಬಿಡುಗಡೆ ವಾರಪತ್ರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು, ವಾಂತಿಯಿಂದ ಬಳಲುತ್ತಿದ್ದ ಅವರನ್ನು ಮೂಡಬಿದಿದರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ಅತ್ತಾವರದ ಕೆ ಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಕರಾವಳಿ ಅಲೆ, ವೆಬ್ ದುನಿಯಾ, ಕಸ್ತೂರಿ ಚಾನಲ್, ವಿಜಯವಾಣಿ ಸಂಸ್ಥೆಗಳಲ್ಲಿಯೂ ಭುವನೇಂದ್ರ ಕಾರ್ಯನಿರ್ವಹಿಸಿದ್ದರು. ಮೃತರು ತಂದೆ–ತಾಯಿ,ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: