3:43 PM Wednesday 15 - October 2025

ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ನೀಡಿ ಯುವತಿ ಅತ್ಯಾಚಾರ | ಅತ್ಯಾಚಾರ ಬಳಿಕ ಕಾಮುಕ ಮಾಡಿದ್ದೇನು ಗೊತ್ತಾ?

mangalore news
22/05/2021

ಮಂಗಳೂರು: ಜ್ಯೂಸ್ ನಲ್ಲಿ  ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಎಸಗಿದ್ದ ಯುವಕನೋರ್ವ ಆ ಬಳಿಕ ಮದುವೆಯಾಗುವುದಾಗಿ ನಂಬಿಸಿ ಇದೀಗ ವಂಚನೆ ಮಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ಸಂತ್ರಸ್ತ ಯುವತಿ ನೀಡಿರುವ ದೂರಿನ ಆಧಾರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

39 ವರ್ಷ ವಯಸ್ಸಿನ ಅರುಣ್ ರಾಜ್ ಕಾಪಿಕಾಡ್ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಡಿಸೆಂಬರ್ ನಲ್ಲಿ ನಗರದ ಹೊಟೇಲೊಂದಕ್ಕೆ ಯುವತಿಯನ್ನು ಕರೆತಂದಿದ್ದ ಈತ, ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಯುವತಿಯ ಜೊತೆಗೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ.  ಬಳಿಕ ಈ ವಿಚಾರವನ್ನು ಯಾರಿಗೂ ಹೇಳಬೇಡ, ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ ಎಂದು ಯುವತಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಇದಾದ ಬಳಿಕವೂ ಮದುವೆಯಾಗುವುದಾಗಿ ನಂಬಿಸಿ ಆತನ ಫ್ಲ್ಯಾಟ್ ಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದು, ಇದರ ಪರಿಣಾಮವಾಗಿ ಯುವತಿ ಗರ್ಭಿಣಿಯಾಗಿದ್ದಾಳೆ. ಈ ವೇಳೆ ಆಕೆಯನ್ನು ನಂಬಿಸಿ ಗರ್ಭಪಾತ ಮಾಡಿದ್ದಾನೆ. ಆ ಬಳಿಕ ಮದುವೆಯಾಗದೇ ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

Exit mobile version