ಜುಲೈ 30: ಎಸ್ ಸಿ –ಎಸ್ ಟಿ ಮಹಾಸಂಗಮ: ಎಂ.ದೇವದಾಸ್

ಇತಿಹಾಸದಲ್ಲಿ ಮೊದಲ ಬಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಹಾಸಂಗಮ ಮತ್ತು ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಕಾರ್ಯಕ್ರಮ ಜುಲೈ 30ರಂದು ಬೆಳಗ್ಗೆ 10 ಗಂಟೆಯಿಂದ ಮಂಗಳೂರಿನ ಉರ್ವಸ್ಟೋರ್‌ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪ್ರಧಾನ ಸಂಚಾಲಕ ಎಂ. ದೇವದಾಸ್ ಮಾಹಿತಿ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಧ್ಯೆ ಸಾಮರಸ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಮತ್ತು ಪರಿಶಿಷ್ಟ ಸಮುದಾಯವನ್ನು ಕಾಡುತ್ತಿರುವ ಹಲವಾರು ಮೂಲಭೂತ ಸಮಸ್ಯೆಗಳ ಈಡೇರಿಕೆಗಾಗಿ ಒತ್ತಾಯಿಸಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು ಇದೇ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ. ಖಾದರ್ ಫರೀದ್ ಮತ್ತು ವಿವಿಧ ಗಣ್ಯರಿಗೆ ಗೌರವಾರ್ಪಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಉಭಯ ಜಿಲ್ಲೆಯಲ್ಲಿ ಪರಿಶಿಷ್ಟ ಸಮುದಾಯಕ್ಕಾಗಿ ಮೀಸಲಿರಿಸಿದ ಡಿ.ಸಿ. ಮನ್ನಾ ಭೂಮಿಯ ಮಂಜೂರಾತಿಗಾಗಿ ಸರಕಾರಕ್ಕೆ ಹಲವಾರು ಮನವಿ ಸಲ್ಲಿಸಿ ಚಳವಳಿಗಳನ್ನು ನಡೆಸಿದರೂ ಸರಕಾರವು ಈವರೆಗೆ ನಮ್ಮ ಬೇಡಿಕೆಗೆ ಸ್ಪಂದಿಸಿ ಭೂಮಂಜೂರಾತಿ ನಿಯಮಾವಳಿಗೆ ತಿದ್ದುಪಡಿಗೊಳಿಸಿ ಅರ್ಹ ಅರ್ಜಿದಾರರಿಗೆ ಭೂಮಿ ಮಂಜೂರಾತಿ ಮಾಡುವಲ್ಲಿ ವಿಫಲಗೊಂಡಿದೆ. ಮಂಗಳೂರು ನಗರದ ಜ್ಯೋತಿ ವೃತ್ತವನ್ನು ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡಲು ಸಂಘಟನೆಗಳು ಒತ್ತಾಯಿಸುತ್ತಾ ಬಂದರೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ಪರಿಶಿಷ್ಟ ಸಮುದಾಯದ ನಿರುದ್ಯೋಗಿ ಯುವಜನರಿಗೆ ಉದ್ಯೋಗ ಮಾಡಲು ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ನೀಡುವ ಅನುದಾನವನ್ನು ಗಣನೀಯ ಕಡಿತಗೊಳಿಸಿರುವುದರಿಂದ ಫಲಾನುಭವಿಗಳಿಗೆ ಸೌಲಭ್ಯ ದೊರಕದೆ ಅವಕಾಶ ವಂಚಿತರಾಗುತ್ತಿದ್ದಾರೆ ಅಂದರು.
ವಿಡಿಯೋ ನೋಡಿ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw