ಜೂನ್ 21ರಿಂದ 2ನೇ ಹಂತದ ಅನ್ ಲಾಕ್ | 16 ಜಿಲ್ಲೆಗಳಲ್ಲಿ ಅನ್ ಲಾಕ್ ಗೆ ಸಿದ್ಧತೆ - Mahanayaka
2:35 AM Wednesday 15 - October 2025

ಜೂನ್ 21ರಿಂದ 2ನೇ ಹಂತದ ಅನ್ ಲಾಕ್ | 16 ಜಿಲ್ಲೆಗಳಲ್ಲಿ ಅನ್ ಲಾಕ್ ಗೆ ಸಿದ್ಧತೆ

yediyurappa
19/06/2021

ಬೆಂಗಳೂರು: ರಾಜ್ಯದಲ್ಲಿ ಜೂನ್ 21ರಿಂದ 2ನೇ ಹಂತದ ಅನ್ ಲಾಕ್ ಆರಂಭವಾಗಲಿದ್ದು, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲು ತೀರ್ಮಾನಿಸಲಾಗಿದೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.


Provided by

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೊವಿಡ್ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದ ನಂತರ ಈ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಶೇ.5ರಷ್ಟು ಕಡಿಮೆ ಪಾಸಿಟಿವಿಟಿ  ಇರುವ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.  ರಾಜ್ಯದಲ್ಲಿ ಸರ್ಕಾರಿ ಬಸ್‌ಗಳ ಓಡಾಟಕ್ಕೂ ಸೋಮವಾರದಿಂದ ಅವಕಾಶ ಮಾಡಿಕೊಡಲಾಗಿದೆ. ಹೋಟೆಲ್‌, ರೆಸ್ಟೊರೆಂಟ್‌ಗಳು ಸಂಜೆ 5ರವರೆಗೂ ಕಾರ್ಯನಿರ್ವಹಿಸಬಹುದು ಎಂದು ಹೇಳಿದ್ದಾರೆ. ಎಂದಿನಂತೆ ನೈಟ್‌ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮುಂದುವರೆಸಲಾಗುವುದು ಎಂದು ಹೇಳಿದ್ದಾರೆ.

ತಾಂತ್ರಿಕ ಸಮಿತಿ ಸಲಹೆ ಮೇರೆಗೆ ಚರ್ಚಿಸಿ ಈ ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಮಂಡ್ಯ, ತುಮಕೂರು, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಗದಗ, ಬೆಂಗಳೂರು, ಕೋಲಾರ, ರಾಯಚೂರು, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅನ್‌ ಲಾಕ್ ಘೋಷಣೆ ಮಾಡಲಾಗಿದೆ. ಉಳಿದ ಹದಿಮೂರು ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುವುದು ಎಂದು ತಿಳಿಸಿದ್ದಾರೆ.

ಮಹಾನಾಯಕ ಡಾಟ್ ಇನ್ ಮಾಧ್ಯಮದ ಸುದ್ದಿಗಳು ನಿಮಗೆ ಸಿಗುತ್ತಿಲ್ಲವೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಈಗಲೇ 8088059494 ನಂಬರ್ ನ್ನು ಸೇರಿಸಿ.

ಇತ್ತೀಚಿನ ಸುದ್ದಿ