ಜೂನ್ 9 ರಿಂದ ಪಿಯು ತರಗತಿ ಆರಂಭ: ಸಮವಸ್ತ್ರ ಕಡ್ಡಾಯ! - Mahanayaka

ಜೂನ್ 9 ರಿಂದ ಪಿಯು ತರಗತಿ ಆರಂಭ: ಸಮವಸ್ತ್ರ ಕಡ್ಡಾಯ!

p uc
19/05/2022

ಬೆಂಗಳೂರು: ಹಿಜಬ್ ವಿವಾದದ ಹಿನ್ನಲೆಯಲ್ಲಿ ಪಿಯುಸಿ ಬೋರ್ಡ್ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಎಲ್ಲ ಕಾಲೇಜುಗಳಿಗೆ ಸೂಚಿಸಿದೆ.2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪಿಯು ಬೋರ್ಡ್ ಕಾಲೇಜು ಪ್ರವೇಶ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಪದವಿಪೂರ್ವ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿನ ಪಿಯು ಕಾಲೇಜುಗಳಿಗೆ ಅನ್ವಯ ಆಗಲಿದ್ದು, ಕೆಲವು ಕಾಲೇಜುಗಳಲ್ಲಿ ಈಗಾಗಲೇ ಸಮವಸ್ತ್ರ ಕಡ್ಡಾಯವಾಗಿದೆ. ಕೆಲವು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲದ್ದರಿಂದ ವಿದ್ಯಾರ್ಥಿಗಳು ಕಲರ್ ಡ್ರೆಸ್ ಹಾಕಿಕೊಂಡು ಬರುತ್ತಿದ್ದರು. ಆದರೆ ಇನ್ನುಂದೆ ಎಲ್ಲರಿಗೂ ಸಮವಸ್ತ್ರ ಕಡ್ಡಾಯವಾಗಿದೆ.

ಒಂದು ವೇಳೆ ಆಡಳಿತ ಮಂಡಳಿ/ಸಿಡಿಸಿ ಸಮವಸ್ತ್ರ ನಿಗದಿ ಪಡಿಸದಿದ್ದಲ್ಲಿ ಸಮಾನತೆ ಮತ್ತು ಏಕತೆ ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದ ಉಡುಪು ಧರಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪಿಯು ಬೋರ್ಡ್ ಕಾಲೇಜು ಪ್ರವೇಶ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ವಿಶೇಷವಾಗಿ ಸಮವಸ್ತ್ರದ ಬಗ್ಗೆ ಸೂಚನೆ ನೀಡಲಾಗಿದೆ. ಮೇ 20ರಿಂದ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಜೂನ್ 1 ರಿಂದ ದ್ವಿತೀಯ ಪಿಯುಸಿ ಪ್ರಕ್ರಿಯೆ ಆರಂಭಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಯ ಮಕ್ಕಳಿಗೆ ಪಠ್ಯಕ್ರಮ ಬೋಧನಾ ಪ್ರಕ್ರಿಯೆ ಜೂನ್ 9 ರಿಂದ ಆರಂಭವಾಗಲಿದೆ.

2022-23ನೇ ಸಾಲಿನ ಶೈಕ್ಷಣಿಕ ಮೊದಲನೇ ಅವಧಿ ಸೆಪ್ಟೆಂಬರ್ 30ರ ವರೆಗೆ ನಡೆಯಲಿದೆ. ಎರಡನೇ ಅವಧಿ ಅಕ್ಟೋಬರ್ 13 ರಿಂದ 2023ರ ಮಾರ್ಚ್ 31ರ ವರೆಗೆ ನಡೆಸಲು ನಿಗದಿಪಡಿಸಲಾಗಿದೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಜೂನ್ 30 ರವರೆಗೆ ಮಕ್ಕಳ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.

ಜೂನ್ 15 ರವರೆಗೆ ಪ್ರಥಮ ಪಿಯುಗೆ ದಂಡ ಶುಲ್ಕವಿಲ್ಲದೆ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜೂನ್ 1 ರಿಂದ 15ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ದಂಡ ಶುಲ್ಕದೊಂದಿಗೆ ಜೂನ್‌ 30 ರವರೆಗೆ ಅವಕಾಶ ನೀಡಲಾಗಿದೆ. ಅಕ್ಟೋಬರ್ 1 ರಿಂದ 12 ರವರೆಗೆ ಮಧ್ಯಂತರ ರಜೆ ಇರಲಿದೆ. ಏಪ್ರಿಲ್ 1 ರಿಂದ ಬೇಸಿಗೆ ರಜೆ ಆರಂಭವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿ ಬಾಲಕಿಯರದ್ದೇ ಮೇಲುಗೈ

ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದು ಇಬ್ಬರು ಕಾರ್ಮಿಕರ ಸಾವು

ಮತ್ತೆ ಎಲ್ ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ: ಗಾಯದ ಮೇಲೆ ಬರೆ!

ಕೆರೆಯಲ್ಲಿ ಮುಳುಗಿ 9ನೇ ತರಗತಿಯ ಇಬ್ಬರು ಬಾಲಕರು ಸಾವು

ಶಿವಲಿಂಗದ ಬಗ್ಗೆ ಅವಹೇಳನಾಕಾರಿ ಪೋಸ್ಟ್: ಎಐಎಂಐಎಂ ನಾಯಕ ಅರೆಸ್ಟ್

 

 

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ