ಹನಿಟ್ರ್ಯಾಪ್: ಕೊನೆಗೂ ದೂರು ನೀಡಿದ ಕೆ.ಎನ್.ರಾಜಣ್ಣ

ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಯಾವುದೇ ದೂರು ದಾಖಲಾಗಿರಲಿಲ್ಲ. ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿರುವ ರಾಜಣ್ಣ, ದೂರು ನೀಡಿದ್ದಾರೆ.
ಗೃಹ ಸಚಿವರ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಂಬಂಧ ದೂರು ದಾಖಲಿಸಿದ್ದಾರೆ. ದೂರನ್ನು ಸ್ವೀಕರಿಸಿರುವ ಡಾ.ಜಿ.ಪರಮೇಶ್ವರ್ ಯಾವ ರೀತಿಯ ತನಿಖೆಗೆ ಆದೇಶ ನೀಡುತ್ತಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಡಾ.ಜಿ.ಪರಮೇಶ್ವರ್, ರಾಜಣ್ಣ ಅವರಿಗೆ ಪೂರ್ವ ಯೋಜಿತ ಕೆಲಸಗಳಿದ್ದ ಕಾರಣ ಅವರು ದೂರು ನೀಡಲು ಸಾಧ್ಯವಾಗಿರಲಿಲ್ಲ. ಇಂದು ನನಗೆ ಮನವಿ ನೀಡಿದ್ದಾರೆ. ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದಂತೆ ಮನವಿ ನೀಡಿದ್ದಾರೆ. ಮುಂದಿನ ಕ್ರಮದ ಬಗ್ಗೆ ಸಿಎಂ ಜೊತೆಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: