11:19 AM Thursday 28 - August 2025

ಕೆ.ಎಸ್.ಆರ್.ಟಿ.ಸಿ. ಬಸ್—ಸ್ಕೂಟಿ ನಡುವೆ ಅಪಘಾತ: ಮಹಿಳೆಯ ದಾರುಣ ಸಾವು

acident
30/01/2024

ಕೊಡಗು: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಗುಡ್ಡೆಹೊಸೂರು ಬಳಿ ನಡೆದಿದೆ.

ಸಿದ್ದಾಪುರ ಗ್ರಾಮದ ಲಲಿತಾ(53) ಮೃತಪಟ್ಟ ಮಹಿಳೆಯಾಗಿದ್ದು, ಸ್ಕೂಟರ್ ಚಲಾಯಿಸುತ್ತಿದ್ದ ಸಿಂಚನಾ ಎಂಬ ಯುವತಿಯ ಸ್ಥಿತಿ ಗಂಭೀರವಾಗಿದೆ.

ಮೃತ ಮಹಿಳೆ ಪರ್ಪಲ್ ಫಾಮ್ ರೆಸಾರ್ಟ್ ಸಿಬ್ಬಂದಿ ಎಂದು ಹೇಳಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಮಡಿಕೇರಿಯಿಂದ ಮೈಸೂರಿಗೆ ಬರುತ್ತಿದ್ದ ವೇಳೆ ಅತ್ತೂರು ಕಡೆಯಿಂದ ಗುಡ್ಡೆಹೊಸೂರು ಕಡೆಗೆ ಸ್ಕೂಟಿಯಲ್ಲಿ ಇಬ್ಬರು ಬರುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ.

ಅಪಘಾತದ ತೀವ್ರತೆಗೆ ಸ್ಕೂಟಿ ಬಸ್ಸಿನಡಿಯಲ್ಲಿ ಸಿಲುಕಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕುಶಾಲನಗರ ಟ್ರಾಫಿಕ್ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version