4:35 AM Saturday 25 - October 2025

ಕೆ.ಎಸ್.ಆರ್.ಟಿ.ಸಿ. ಡಿಸಿ ಮೇಲೆ ಬಸ್ ನಿಲ್ದಾಣದಲ್ಲೇ ಚಾಕುವಿನಿಂದ ದಾಳಿ!

12/09/2024

ಚಿಕ್ಕಮಗಳೂರು:   ಕೆ.ಎಸ್.ಆರ್.ಟಿ.ಸಿ. ಡಿಸಿಗೆ  ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಯೇ  ಚಾಕುವಿನಿಂದ ದಾಳಿಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಸರ್ಕಾರಿ ಬಾಸ್ ನಿಲ್ದಾಣದಲ್ಲಿ ನಡೆಯಿತು.

ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಎಂಬಾತ ಕೆ.ಎಸ್.ಆರ್.ಟಿ.ಸಿ. ಡಿಸಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಈ ವೇಳೆ ಕೈ ಅಡ್ಡ ಇಟ್ಟ ಪರಿಣಾಮ ಕೆ.ಎಸ್.ಆರ್.ಟಿ.ಸಿ. ಡಿಸಿಯ ಪ್ರಾಣ ಉಳಿದಿದೆ.

ರಿತೇಶ್ ಹಾಜರಾತಿ ಸರಿಯಿಲ್ಲ ಎಂದು ಕುಟುಂಬವನ್ನ ಕರೆಸಿ ಡಿಸಿ ಕೌನ್ಸಿಲಿಂಗ್ ಮಾಡಿಸಿದ್ದರು. ಇದರಿಂದ ಆಕ್ರೋಶಗೊಂಡ ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಕುಟುಂಬದವರ ಮನವಿ ಮೇರೆಗೆ ರಿತೇಶ್ ನನ್ನು ಚಿಕ್ಕಮಗಳೂರಿನಿಂದ ಬೇಲೂರಿಗೆ ವರ್ಗಾವಣೆ ಮಾಡಲಾಗಿತ್ತು. ಇಂದು ಏಕಾಏಕಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿರುವ ರಿತೇಶ್  ಹಲ್ಲೆ ಬಳಿಕ ನಾಪತ್ತೆಯಾಗಿದ್ದಾನೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version