ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: 16 ವರ್ಷದ ಬಾಲಕ ಅರೆಸ್ಟ್
ಕಲಬುರಗಿ: ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಮೃತದೇಹ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘಟನೆ ನಡೆದು 24 ಗಂಟೆಗಳಲ್ಲಿ ಬಾಲಕಿ ವಾಸವಿದ್ದ ಗ್ರಾಮದ 16 ವರ್ಷದ ಬಾಲಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿತ್ತು.
ಅಫಜಲಪುರ ತಾಲೂಕಿನ 15 ವರ್ಷದ ಬಾಲಕಿ ಕೊರಳ್ಳ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಸಾಯಂಕಾಲ ವೇಳೆ ಬಹಿರ್ದೆಸೆಗೆಂದು ಗದ್ದೆಯ ಕಡೆಗೆ ಹೋಗಿದ್ದ ವೇಳೆ ದುಷ್ಕರ್ಮಿ ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದು ಎಂದು ಹೇಳಲಾಗಿದೆ.
ಸದ್ಯ ಆರೋಪಿಯನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಪೊಲೀಸರ ತನಿಖೆಯಿಂದ ಇನ್ನಷ್ಟು ಮಾಹಿತಿಗಳು ಹೊರ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇನ್ನೂ ಪ್ರಕರಣವನ್ನು 24 ಗಂಟೆಗಳಲ್ಲೇ ಭೇದಿಸಿದ ಸಿಬ್ಬಂದಿಗೆ 1 ಲಕ್ಷ ರೂಪಾಯಿ ಬಹುಮಾನವನ್ನು ಕಲಬುರಗಿ ಎಸ್ ಪಿ ಇಶಾ ಪಂತ್ ಘೋಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ ಎಂದ ಪಂತ್ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
Video: ಸಿ.ಟಿ.ರವಿಗೆ ಕಪ್ಪುಪಟ್ಟಿ ಪ್ರದರ್ಶನ