ಹಿಂದುತ್ವವಾದಿ ಎಂದು ಮನಸ್ಸಿಗೆ ಬಂದ ಹಾಗೆ ಮಾತನಾಡುವುದಲ್ಲ: ಯತ್ನಾಳ್ ಉಚ್ಛಾಟನೆಗೆ ಕಲ್ಲಡ್ಕ ಪ್ರಭಾಕರ ಭಟ್ ಸಮರ್ಥನೆ - Mahanayaka

ಹಿಂದುತ್ವವಾದಿ ಎಂದು ಮನಸ್ಸಿಗೆ ಬಂದ ಹಾಗೆ ಮಾತನಾಡುವುದಲ್ಲ: ಯತ್ನಾಳ್ ಉಚ್ಛಾಟನೆಗೆ ಕಲ್ಲಡ್ಕ ಪ್ರಭಾಕರ ಭಟ್ ಸಮರ್ಥನೆ

kalladka prabhakar bhat
31/03/2025

ಮಂಡ್ಯ : ನಾಮ ಹಾಕಿದ ಮಾತ್ರಕ್ಕೆ , ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದ ಮಾತ್ರಕ್ಕೆ ಹಿಂದುತ್ವ ಆಗುವುದಿಲ್ಲ. ಹಿಂದುತ್ವದಲ್ಲಿ ಒಂದು ಶಿಸ್ತಿದೆ. ಅನುಶಾಸನ ಇದೆ. ಅನುಶಾಸನ ಇಲ್ಲದಿದ್ದರೆ ಶಿಸ್ತಾಗುವುದಿಲ್ಲ ಎಂದು ಆರ್ ಎಸ್ ಎಸ್ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್, ಹಿಂದೂ ಹುಲಿ ಎಂದು ಕರೆಯಲ್ಪಡುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತರಾಟೆಗೆತ್ತಿಕೊಂಡಿದ್ದಾರೆ.


Provided by

ಯತ್ನಾಳರ ಉಚ್ಚಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹಿಂದುತ್ವವಾದಿ ಎಂದು ಮನಸ್ಸಿಗೆ ಬಂದ ಹಾಗೆ ಮಾತನಾಡುವುದಲ್ಲ. ಸಾರ್ವಜನಿಕವಾಗಿ ಮಾತನಾಡುವಾಗ ಮಾತಿನ ಮೇಲೆ ನಿಗಾವಹಿಸಬೇಕು ಎಂದು ಯತ್ನಾಳ್ ಗೆ ಭಟ್ ಪಾಠ ಮಾಡಿದ್ದಾರೆ.

ಒಂದು ಸಂಘಟನೆಯಲ್ಲಿದ್ದಾಗ ಮಾತು ಮಿತಿ ಮೀರಿ ಹೋಗಬಾರದು. ಪಕ್ಷದ ಚೌಕಟ್ಟಿನೊಳಗೆ ಮಾತನಾಡಬೇಕು. ಬೀದಿಯಲ್ಲಿ ಮಾತನಾಡುವುದು ಹಿಂದುತ್ವದ ಲಕ್ಷಣ ಅಲ್ಲ. ಹಿಂದುತ್ವದಲ್ಲಿ ಶಿಸ್ತು ಇದೆ ಎಂದು ಆರ್ಎಸ್ಎಸ್ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್, ಯತ್ನಾಳರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾಮ ಹಾಕಿದ ಮಾತ್ರಕ್ಕೆ , ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದ ಮಾತ್ರಕ್ಕೆ ಹಿಂದುತ್ವ ಆಗುವುದಿಲ್ಲ. ಹಿಂದುತ್ವದಲ್ಲಿ ಒಂದು ಶಿಸ್ತಿದೆ. ಅನುಶಾಸನ ಇದೆ. ಅನುಶಾಸನ ಇಲ್ಲದಿದ್ದರೆ ಶಿಸ್ತಾಗುವುದಿಲ್ಲ ಎನ್ನುವ ಮೂಲಕ ಬಿಜೆಪಿಯಿಂದ ಯತ್ನಾಳರ ಉಚ್ಚಾಟನೆಯನ್ನು ಭಟ್ ಸಮರ್ಥಿಸಿಕೊಂಡರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

 

ಇತ್ತೀಚಿನ ಸುದ್ದಿ