ರಾಷ್ಟ್ರಧ್ವಜಕ್ಕೆ ಅವಮಾನ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು - Mahanayaka

ರಾಷ್ಟ್ರಧ್ವಜಕ್ಕೆ ಅವಮಾನ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

kalladka prabhakar bhat
01/03/2022


Provided by

ಬಂಟ್ವಾಳ: ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಫೆ. 20ರಂದು ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ರಾಷ್ಟ್ರಧ್ವಜಕ್ಕೆ ಅವಮಾನವಾಗುವ ರೀತಿ ಭಾಷಣ ಮಾಡಿರುವ ಜತೆಗೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಮಾಜದ ಶಾಂತಿ ಕದಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಡಾ. ಪ್ರಭಾಕರ ಭಟ್ ಅವರು, ದೇವಂದಬೆಟ್ಟು ದೇವಸ್ಥಾನದ ಬ್ರಹ್ಮಕಲಶದ ಧಾರ್ಮಿಕ ಸಭೆಯಲ್ಲಿ ರಾಷ್ಟ್ರಧ್ವಜದ ಕುರಿತು ಕೀಳಾಗಿ ಮಾತನಾಡುವ ಜತೆಗೆ ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ. ಪ್ರಸ್ತುತ ಅದರ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗುವ ಆತಂಕ ಎದುರಾಗಿದೆ ಎಂದು ಸುರೇಶ್ ಜೋರಾ ದೂರಿನಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ನದಿಯಲ್ಲಿ ಪತ್ತೆ

ಕೆಂಪು ಕಲ್ಲಿನ ಅಟ್ಟಿ ಮಗುಚಿಬಿದ್ದು ಮಗು ಸಾವು

ಕಚ್ಚಾ ಬದಾಮ್ ಸಿಂಗರ್ ಭುಬನ್ ಬದ್ಯಾಕರ್ ಅಪಘಾತ

ನಟ ಚೇತನ್ ಅಹಿಂಸಾ ಬಿಡುಗಡೆ: ಅಭಿಮಾನಿಗಳಿಂದ ಸಂಭ್ರಮಾಚರಣೆ

ರಷ್ಯಾ ದಾಳಿ: 14 ಮಕ್ಕಳು ಸೇರಿದಂತೆ 352 ಮಂದಿ ನಾಗರಿಕರು ಸಾವು; ಉಕ್ರೇನ್‌

ಇತ್ತೀಚಿನ ಸುದ್ದಿ