ಸರ್ಕಾರಿ ಬಸ್ ಗಳಿಗೆ ಕಲ್ಲು ತೂರಾಟ ಮಾಡಲು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪ್ರಚೋದನೆ | ಸಿಎಂ ಯಡಿಯೂರಪ್ಪ ಹೇಳಿಕೆ - Mahanayaka

ಸರ್ಕಾರಿ ಬಸ್ ಗಳಿಗೆ ಕಲ್ಲು ತೂರಾಟ ಮಾಡಲು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪ್ರಚೋದನೆ | ಸಿಎಂ ಯಡಿಯೂರಪ್ಪ ಹೇಳಿಕೆ

12/12/2020

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರವ ವಿರುದ್ಧ ಎತ್ತಿಕಟ್ಟಿ ದುರುದ್ದೇಶದಿಂದ ಮುಷ್ಕರ ನಡೆಸಲಾಗುತ್ತಿದೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಸಾರಿಗೆ ನೌಕರರನ್ನು ಎತ್ತಿಕಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ.

 ರಾಜ್ಯದ ವಿವಿಧೆಡೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಕೋಡಿಹಳ್ಳಿ ಚಂದ್ರಶೇಖರ್ ಪ್ರಚೋದಿಸಿದ್ದು,  ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಲು ಕಾರಣಕರ್ತರಾಗಿದ್ದಾರೆ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.


Provided by

ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಸಲಹೆ ಸೂಚನೆಗಳನ್ನು ನೀಡಿದ್ದು, ಅವರು ಕೂಡಾ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಬಗ್ಗೆ ಅತ್ಯಂತ ಲಘುವಾಗಿ ಮಾತನಾಡಿರುವುದು ಕೂಡಾ ಖಂಡನೀಯವಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ ಕರ್ತವ್ಯಕ್ಕೆ ಮರಳಿ ನಂತರ ಸಾರಿಗೆ ಸಚಿವರ ಜೊತೆಗೆ ಚರ್ಚೆಗೆ ಬರಲು ಮತ್ತೊಮ್ಮೆ ಮನವಿ ಮಾಡುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ ಮನವಿಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ