ಉದ್ದೇಶ ಪೂರ್ವಕವಾಗಿ ಮಹಿಳಾ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆಸಿದ ಆರೋಪಿ ಅರೆಸ್ಟ್ - Mahanayaka

ಉದ್ದೇಶ ಪೂರ್ವಕವಾಗಿ ಮಹಿಳಾ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆಸಿದ ಆರೋಪಿ ಅರೆಸ್ಟ್

kalyan bainsla arrested
15/09/2026

ಹರಿಯಾಣ: ಇಲ್ಲಿನ ಗುರುಗ್ರಾಮ್‌ ನಲ್ಲಿ ಮಹಿಳಾ ಬೈಕ್ ಸವಾರೆಗೆ ಕಾರಿನಿಂದ ಉದ್ದೇಶಪೂರ್ವಕವಾಗಿ ಗುದ್ದಿ ಪರಾರಿಯಾಗಿದ್ದ ಪ್ರಕರಣದ ಮುಖ್ಯ ಆರೋಪಿ ಕಲ್ಯಾಣ್ ಬೈನ್ಸ್ಲಾನನ್ನು ಪೊಲೀಸರು ರಾಜಸ್ಥಾನದಲ್ಲಿ ವಶಕ್ಕೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು ಮತ್ತು ತನಿಖೆಯ ಆಧಾರದ ಮೇಲೆ ಗುರುಗ್ರಾಮ್ ಪೊಲೀಸರು ಆರೋಪಿಯ ವಿರುದ್ಧ ಕೊಲೆ ಯತ್ನ (Attempt to Murder) ಆರೋಪದಡಿ ಸೆಕ್ಷನ್ ಅನ್ನು ದಾಖಲಿಸಿದ್ದಾರೆ. ಈ ಅಪರಾಧವು ಸಾಬೀತಾದರೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಗುರುಗ್ರಾಮ್‌ ನ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಮಹಿಳಾ ಬೈಕ್ ಸವಾರಿಯೊಬ್ಬರು ತಮ್ಮ ಕ್ರೀಡಾ ಬೈಕ್‌ನಲ್ಲಿ (Aprilia RS 457) ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಬಿಳಿ ಬಣ್ಣದ ಸೆಡಾನ್ ಕಾರು ಅವರನ್ನು ತೀವ್ರವಾಗಿ ಗುದ್ದಿತ್ತು. ಕಾರಿನಲ್ಲಿದ್ದವರು ತಮ್ಮನ್ನು ಹಿಂಬಾಲಿಸಿ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಬೈಕ್ ಸವಾರಿಯೂ ಆರೋಪಿಸಿದ್ದರು. ಈ ಭೀಕರ ಅಪಘಾತದ ದೃಶ್ಯ ಬೈಕ್‌ನಲ್ಲಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸಾರ್ವಜನಿಕವಾಗಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಗುರುಗ್ರಾಮ್ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ ಆರೋಪಿಯನ್ನು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Suspected Malware | Cloudflare

Warning

Suspected Malware

This website has been reported for potentially distributing malware.

Malware is malicious software created to intentionally disrupt the normal operations of a device.

Learn More