5:50 PM Wednesday 20 - August 2025

ಬೀದಿಯಲ್ಲೇ ತಾಯಿಗೆ ಹೊಡೆದು ನಿಂದಿಸಿದ ಮಗ: ತನ್ನ ಪುತ್ರನಿಗೆ ಶಿಕ್ಷೆ ಕೊಡಬೇಡಿ ಎಂದು ಪೊಲೀಸರಲ್ಲಿ ಬೇಡಿದ ಅಮ್ಮ..!

14/06/2023

ಮಧ್ಯಪ್ರದೇಶದ ಇಂದೋರ್ ನಲ್ಲಿ ಮಹಿಳೆಗೆ ಥಳಿಸುವ ವಿಡಿಯೋ ವೈರಲ್ ಆದ ನಂತರ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಸುರೇಶ್ ವರ್ಮಾ ತನ್ನ ತಾಯಿ ಲೀಲಾಬಾಯಿಗೆ ಕಪಾಳಮೋಕ್ಷ ಮಾಡಿ ಒದೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬಹಳ ಟೀಕೆ, ಆಕ್ರೋಶಕ್ಕೆ ಗುರಿಯಾಗಿದೆ. ತನಿಖೆ ನಡೆಸಿದ ಪೊಲೀಸರು ವರ್ಮಾ ಅವರನ್ನು ವಶಕ್ಕೆ ತೆಗೆದುಕೊಂಡು ಚಂದನ್ ನಗರ ಪೊಲೀಸ್ ಠಾಣೆಗೆ ಕರೆತಂದರು. ಆದಾಗ್ಯೂ, ಅವರ ತಾಯಿ ಮಗನ ವಿರುದ್ಧ ಯಾವುದೇ ದೂರು ದಾಖಲಿಸಲು ನಿರಾಕರಿಸಿದರು.

ತನ್ನ ಮಗನನ್ನು ಬಿಡುಗಡೆ ಮಾಡುವಂತೆ ಪೊಲೀಸ್ ಅಧಿಕಾರಿಗಳ ಹತ್ತಿರ ಮನವಿ ಮಾಡಿದರು. ಮಗ ವರ್ಮಾ ಕುಡಿದು ಈ ರೀತಿ ವರ್ತಿಸಿದ್ದಾನೆ. ಈ ಕುರಿತು ನನ್ನಲ್ಲಿ ಕ್ಷಮೆಯಾಚಿಸಿದ್ದಾನೆ ಎಂದು ತಾಯಿ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version