ಕಮರಿಗೆ ಉರುಳಿ ಬಿದ್ದ ಆಟೋ: ಚಾಲಕ ಸ್ಥಳದಲ್ಲೇ ಸಾವು - Mahanayaka

ಕಮರಿಗೆ ಉರುಳಿ ಬಿದ್ದ ಆಟೋ: ಚಾಲಕ ಸ್ಥಳದಲ್ಲೇ ಸಾವು

anand saphalya
14/09/2022

ಮಂಗಳೂರು: ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ.


Provided by

ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ.

ಆನಂದ್ ಅವರು ಬಾಡಿಗೆಗೆ‌ ತೆರಳಿ ಹಿಂತಿರುಗುತ್ತಿರುವ ವೇಳೆ ಅವಘಡ ನಡೆದಿದೆ. ಪಾನೀರು ಅಸ್ಸಿಸಿ ಶಾಲೆ ಬಳಿ ಆನಂದ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಉರುಳಿ ಕಮರಿಗೆ ಬಿದ್ದಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ.

ಈ ಸಂಬಂಧ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ