8 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಜೈಲು

ಚಾಮರಾಜನಗರ: 8 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.
ಯಳಂದೂರು ಪಟ್ಟಣ ನಿವಾಸಿ ಮಹೇಶ್(38) ಶಿಕ್ಷೆಗೊಳಗಾದ ಅಪರಾಧಿ. ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎ.ಸಿ.ನಿಶಾರಾಣಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಜೊತೆಗೆ, 15 ಸಾವಿರ ರೂ. ದಂಡ ವಿಧಿಸಿದ್ದಾರೆ. ಕಾನೂನು ಸೇವಾ ಪ್ರಾಧಿಕಾರವು ಸಂತ್ರಸ್ಥ ಬಾಲಕಿಗೆ 4 ಲಕ್ಷ ರೂ. ಪರಿಹಾರ ಕೊಡುವಂತೆ ಸೂಚಿಸಿದೆ.
ಏನಿದು ಘಟನೆ: 2019 ರಲ್ಲಿ ಮನೆಯಲ್ಲಿ ಮಗಳೊಟ್ಟಿಗೆ 8 ವರ್ಷದ ಬಾಲಕಿ ಟಿವಿ ನೋಡುತ್ತಿದ್ದಾಗ ಬಂದ ಈ ಮಹೇಶ್ ಮಗಳನ್ನು ಹೊರಗಡೆ ಕಳುಹಿಸಿ ಸಂತ್ರಸ್ಥೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದ, ಬಳಿಕ ಬಾಲಕಿ ವರ್ತನೆಯಿಂದ ಮಹೇಶನ ಕಾಮುಕತೆ ಬೆಳಕಿಗೆ ಬಂದಿತ್ತು.
ಘಟನೆ ಸಂಬಂಧ ಯಳಂದೂರು ಠಾಣೆಯಲ್ಲಿ ಪ್ರಕರಣವು ದಾಖಲಾಗಿತ್ತು. ಇನ್ನು, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಯೋಗೇಶ್ ವಾದ ಮಂಡಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw